ಸಿಟಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ : ಮುನಿಯಪ್ಪ

KH Muniyappa
ಬೆಂಗಳೂರು, ಜ. 9 : ನಗರದ ರೈಲ್ವೆ ನಿಲ್ದಾಣ ಹಾಗೂ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.

ದಂಡು ರೈಲ್ವೆ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆ ಇಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ನಗರದ ನಿಲ್ದಾಣವನ್ನು ಕೂಡಲೇ ಮೇಲ್ದರ್ಜೆಗೇರಿಸಲಾಗುವುದು ಎಂದರು.

ದಂಡು ರೈಲ್ವೆ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮುಂಗಡ ಟಿಕೆಟ್ ಬುಕಿಂಗ್ ಕೇಂದ್ರದಲ್ಲಿ ಐದು ಕೌಂಟರ್‌ ಗಳನ್ನು ತೆರೆಯಲಾಗಿದೆ. ಅವುಗಳಲ್ಲಿ ಒಂದನ್ನು ಅಂಗವಿಕಲರಿಗಾಗಿ ಮೀಸಲಿರಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರಿಗೆ ಅನುಲಕೂಲವಾಗಲಿದೆ ಎಂದು ಮುನಿಯಪ್ಪ ಹೇಳಿದರು.

ಬೆಂಗಳೂರು-ಕಾರವಾರ ಮಧ್ಯೆ ನೇರ ರೈಲು ಓಡಿಸಲು ಚಿಂತನೆ ನಡೆಸಲಾಗುತ್ತಿದೆ. ಹುಬ್ಬಳ್ಳಿ-ಅಂಕೋಲಾ, ತಾಳಗುಪ್ಪ-ಹೊನ್ನಾವರ, ಚಾಮರಾಜನಗರ -ಮೇಟುಪಾಳ್ಯ ರೈಲ್ವೆ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ಕೇಂದ್ರ ಪರಿಸರ ಸಚಿವ ಜಯರಾಂ ರಮೇಶ್ ಅವರಿಗೆ ಮನವಿ ಮಾಡಲಾಗುವುದು ಎಂದು ಮುನಿಯಪ್ಪ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶ್ರಾಂತಿ ಗೃಹ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+