ಗಣಿ ಅಕ್ರಮಕ್ಕೆ ಸಿಎಂ ಕುಮ್ಮಕ್ಕು: ಕುಮಾರಸ್ವಾಮಿ

HD Kumaraswamy
ರಾಮನಗರ, ಜ. 10: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರ ಅಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸಚಿವರುಗಳು ಗಣಿ ಅಕ್ರಮದಲ್ಲಿ ತೊಡಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರಿಗೆ ಸುಳ್ಳು ವರದಿ ನೀಡಿದ್ದಾರೆ. ಆ ಮೂಲಕ ರಾಜ್ಯದ ಜನತೆಗೆ ಯಡಿಯೂರಪ್ಪ ಸುಳ್ಳು ಹೇಳಿದ್ದಾರೆ ಎಂದು ಟೀಕಿಸಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಜೊತೆಗೂಡಿ ವಿಧಾನ ಮಂಡಲದಲ್ಲಿ ಹೋರಾಟ ರೂಪಿಸಲಾಗುವುದು. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಜನಾರ್ದನ ರೆಡ್ಡಿ ಅವರ ರಾಜೀನಾಮೆ ಪಡೆದುಕೊಳ್ಳುವ ಧೈರ್ಯವನ್ನು ಯಡಿಯೂರಪ್ಪ ಪ್ರದರ್ಶಿಸಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.

ಇಂದು ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಜನಾರ್ದನರೆಡ್ಡಿ ರಾಜೀನಾಮೆ, ಮುಖ್ಯಮಂತ್ರಿಗಳ ಮೇಲಿರುವ ಭೂಹಗರಣ ಮತ್ತು ಸ್ವೀಕರ್ ಬೋಪಯ್ಯ ಅವರ ವಿರುದ್ಧ ನಿಲುವಳಿ ಮಂಡಿಸುವ ಸಾಧ್ಯತೆ ಇದೆ. ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಇಸಿ ಸುಪ್ರೀಕೋರ್ಟ್ ಗೆ ನೀಡಿರುವ ವರದಿ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ನಿಜ. ಪ್ರತಿಪಕ್ಷಗಳು ರೆಡ್ಡಿ ರಾಜೀನಾಮೆಗೆ ಪಟ್ಟು ಹಿಡಿಯುವುದಾಗಿ ಈಗಾಗಲೇ ಘೋಷಣೆ ಮಾಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+