ವಿದ್ಯುತ್ ದರ ಏರಿಕೆ ಅನಿವಾರ್ಯ : ಸಚಿವೆ ಶೋಭಾ

ಸೋಮವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರದಂದು 156 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ದಾಖಲಾಗಿದೆ. ಅಷ್ಟೇ ಪ್ರಮಾಣದ ವಿದ್ಯುತ್ ಪೂರೈಕೆ ಮಾಡಲಾಗಿದೆ. ರಾಜ್ಯದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾಪವನ್ನು ಸರ್ಕಾರ ರದ್ದುಪಡಿಸಿರುವುದಾಗಿ ಹೇಳಿರಲಿಲ್ಲ. ವಿದ್ಯುತ್ ವಿತರಣಾ ಕಂಪೆನಿಗಳು 5,000 ಕೋಟಿ ರೂ. ಸಾಲದಲ್ಲಿವೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.
ಇಂಧನ ಇಲಾಖೆಯಲ್ಲಿ ಶೇ.50ರಷ್ಟು ಲೈನ್‌ಮ್ಯಾನ್‌ಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಶೇ.25ರಷ್ಟು ಹುದ್ದೆಗಳ ಭರ್ತಿಗೆ ಅವಕಾಶ ನೀಡುವಂತೆ ಇಲಾಖೆಯಿಂದ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಇಷ್ಟರಲ್ಲಿಯೇ ಒಪ್ಪಿಗೆ ಸಿಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. [ಶೋಭಾ ಕರಂದ್ಲಾಜೆ]












Click it and Unblock the Notifications