• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿದ್ಯುತ್ ದರ ಏರಿಕೆ ಅನಿವಾರ್ಯ : ಸಚಿವೆ ಶೋಭಾ

By * ಕೆ.ಆರ್ ಸೋಮನಾಥ್, ಶಿವಮೊಗ್ಗ
|

ಶಿವಮೊಗ್ಗ, ಜ.11: ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ರಾಜ್ಯದ ವಿದ್ಯುತ್ ಬೇಡಿಕೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ ಗುರುವಾರದ ದಿನದಂದು ರಾಜ್ಯದ ಇತಿಹಾಸದಲ್ಲಿಯೇ ಅತ್ಯಧಿಕ ವಿದ್ಯುತ್ ಬೇಡಿಕೆ ದಾಖಲಾಗಿದೆ ಎಂದು ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸೋಮವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರದಂದು 156 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ದಾಖಲಾಗಿದೆ. ಅಷ್ಟೇ ಪ್ರಮಾಣದ ವಿದ್ಯುತ್ ಪೂರೈಕೆ ಮಾಡಲಾಗಿದೆ. ರಾಜ್ಯದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾಪವನ್ನು ಸರ್ಕಾರ ರದ್ದುಪಡಿಸಿರುವುದಾಗಿ ಹೇಳಿರಲಿಲ್ಲ. ವಿದ್ಯುತ್ ವಿತರಣಾ ಕಂಪೆನಿಗಳು 5,000 ಕೋಟಿ ರೂ. ಸಾಲದಲ್ಲಿವೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.

ಇಂಧನ ಇಲಾಖೆಯಲ್ಲಿ ಶೇ.50ರಷ್ಟು ಲೈನ್‌ಮ್ಯಾನ್‌ಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಶೇ.25ರಷ್ಟು ಹುದ್ದೆಗಳ ಭರ್ತಿಗೆ ಅವಕಾಶ ನೀಡುವಂತೆ ಇಲಾಖೆಯಿಂದ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಇಷ್ಟರಲ್ಲಿಯೇ ಒಪ್ಪಿಗೆ ಸಿಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. [ಶೋಭಾ ಕರಂದ್ಲಾಜೆ]

English summary
Karnataka Energy minister Shobha Karandlaje repeated her firm decision on increasing power tariff in Karnataka. She said Power transporting companies are under heavy loss and lack sufficient staff. Govt never said it has dropped plan to hike power tariff during ZP, TP Elections she added in press meet in Shimoga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X