ನಮ್ಮ ಬೆಂಗಳೂರು ಪ್ರಶಸ್ತಿಗೆ 10 ಸಾವಿರ ಜನ ಸ್ಪರ್ಧೆ

MP Rajeev Chandrashekar
ಬೆಂಗಳೂರು, ಜ.12: ಕಳೆದ ಬಾರಿ ನಮ್ಮ ಬೆಂಗಳೂರು ಪ್ರಶಸ್ತಿಗೆ ಸುಮಾರು 4 ಸಾವಿರ ಜನರ ಹೆಸರನ್ನು ಸೂಚಿಸಲಾಗಿತ್ತು. ಈ ಬಾರಿ ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 10 ಸಾವಿರಕ್ಕೂ ಹೆಚ್ಚು ವ್ಯಕ್ತಿಗಳ ಹೆಸರನ್ನು ಸೂಚಿಸಿ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಸಂಸದ ರಾಜೀವ್ ಚಂದ್ರಶೇಖರ್ ಸುದ್ದಿಗಾರರಿಗೆ ಹೇಳಿದರು.

ತೀರ್ಪುಗಾರರ ಸಭೆಯಲ್ಲಿ ಮಾತನಾಡಿದ ನಮ್ಮ ಬೆಂಗಳೂರು ಪ್ರತಿಷ್ಠಾನದ ಅಧ್ಯಕ್ಷ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಪ್ರಶಸ್ತಿಗೆ ಹೆಸರನ್ನು ಸೂಚಿಸಿದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಗರದ ಬೆಳವಣಿಗೆಗೆ ಇನ್ನಷ್ಟು ಕೊಡುಗೆ ನೀಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಉದ್ಯಮಿಗಳು, ಸ್ವಯಂ ಸೇವಾ ಸಂಘಗಳು, ಎನ್ ಜಿಒಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆ ತೋರಿರುವ ಜನ ಸಮಾನ್ಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಫೆ.4ರಂದು ಸಮಾರಂಭ: ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಂದುವರಿದಿದೆ. ಆಯ್ಕೆ ಸಮಿತಿಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕೆಎಸ್ ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ನಿವೃತ್ತ ಐಎಎಸ್ ಅಧಿಕಾರಿ ಡಾ. ಎ ರವೀಂದ್ರ ಸೇರಿದಂತೆ 21 ಜನ ಗಣ್ಯರು ಸಮಿತಿಯಲ್ಲಿದ್ದಾರೆ.

ಅಂತಿಮ ಪಟ್ಟಿಯನ್ನು ಅರಮನೆ ಮೈದಾನದಲ್ಲಿ ಫೆ.4ರಂದು ನಡೆಯುವ ಸಮಾರಂಭದಲ್ಲಿ ಪ್ರಕಟಿಸಿ, ನಂತರ ಅಂದೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜೀವ್ ಹೇಳಿದರು. [ರಾಜೀವ್ ಚಂದ್ರಶೇಖರ್]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+