ಶಬರಿಮಲೆಗೆ ಶೋಭಾ ಕರಂದ್ಲಾಜೆ, ಉಮೇಶ್ ಕತ್ತಿ ದೌಡು

ಸಚಿವರಾದ ಉಮೇಶ್ ಕತ್ತಿ ಹಾಗೂ ಶೋಭಾ ಕರಂದ್ಲಾಜೆ ಅವರು ಪರಿಹಾರ ಕ್ರಮಗಳಿಗಾಗಿ ಅಧಿಕಾರಿಗಳೊಂದಿಗೆ ಕೊಚ್ಚಿಗೆ ಪ್ರಯಾಣ ಬೆಳೆಸಿದ್ದಾರೆ (ಮೃತರ ದೇಹಗಳನ್ನು ಸಂಬಂಧಪಟ್ಟವರಿಗೆ ತಲುಪಿಸಲು). ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೃತರ ಕುಟುಂಬಕ್ಕೆ ತಲಾ ರು.1 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಿಗೆ ರು.25 ಸಾವಿರ ಪರಿಹಾರ ಧನವನ್ನೂ ಮುಖ್ಯಮಂತ್ರಿಗಳು ಘೋಷಿಸಿದ್ದು, ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಸಂಸದ ರಾಜೀವ್ ಚಂದ್ರಶೇಖರ್ ಕೂಡ ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು ವಿಷಾದಿಸಿದ್ದಾರೆ. ದೇಶದ ಮೂಲೆಮೂಲೆಗಳಿಂದಸಂತಾಪ ವ್ಯಕ್ತವಾಗಿದೆ.
ಬೆಂಗಳೂರು ಸಹಾಯವಾಣಿ : 080-2221 1177












Click it and Unblock the Notifications