ಮೊಯ್ಲಿ ಕೈಗೆ ಮಾನವ ಸಂಪನ್ಮೂಲ ಖಾತೆ?

ಮುಖ್ಯವಾಗಿ ಕೇಂದ್ರ ಕಾನೂನು ಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಖಾತೆ ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದ್ದು, ಮೊಯ್ಲಿ ಅವರಿಗೆ ಮಾನವ ಸಂಪನ್ಮೂಲ ಖಾತೆ ದೊರೆಯುವ ನಿರೀಕ್ಷೆ ಇದೆ. ಜೊತೆಗೆ ದಕ್ಷರಲ್ಲದ 8 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುವ ಎಲ್ಲ ಸಾಧ್ಯತೆಗಳು ಇವೆ.
ಹಣಕಾಸು, ಗೃಹ, ರಕ್ಷಣೆ ಮತ್ತು ವಿದೇಶಾಂಗ ಖಾತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಡಿಎಂಕೆ ಮುಖಂಡ ರಾಜಾ ನಿರ್ಗಮನದಿಂದ ಖಾಲಿಯಾಗಿರುವ ಸ್ಥಾನಕ್ಕೆ ಅದೇ ಪಕ್ಷದ ಸಂಸದರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಖಚಿತ. ಸಲ್ಮಾನ್ ಖುರ್ಷೀದ್ ಅವರನ್ನು ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡುವುದು. ಫೃಥ್ವಿರಾಜ್ ಚೌಹಾನ್ ಮತ್ತು ಶಶಿ ತರೂರ್ ಅವರಿಂದ ತೆರವಾದ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಶಶಿ ತರೂರ್ ಸ್ಥಾನಕ್ಕೆ ಜ್ಯೋತಿರಾಧಿತ್ಯ ಸಿಂಧಿಯಾ ಕಣ್ಣಿಟ್ಟಿದ್ದು, ತೆರೆಮರೆಯಲ್ಲಿ ತೀವ್ರ ಲಾಭಿ ಆರಂಭಿಸಿದ್ದಾರೆ.
ಕರ್ನಾಟಕದ ನಾಲ್ಕು ಮಂದಿ ಕೇಂದ್ರ ಮಂತ್ರಿ ಮಂಡಲದಲ್ಲಿದ್ದಾರೆ. ಎಸ್ ಎಂ ಕೃಷ್ಣ, ಮಲ್ಲಿಕಾರ್ಜನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿದ್ದರೆ, ಕೆ ಎಚ್ ಮುನಿಯಪ್ಪ ರಾಜ್ಯ ಖಾತೆಯನ್ನು ಹೊಂದಿದ್ದಾರೆ. ಇದರಲ್ಲಿ ಮೊಯ್ಲಿ ಅವರ ಖಾತೆ ಬದಲಾವಣೆಯಾಗುವ ಸಾಧ್ಯತೆಗಳು ಇವೆ.












Click it and Unblock the Notifications