ರಾಜ್ಯಪಾಲರ ವಾಪಸಾತಿ ಏಕೆ ? ಗುಲಾಂ ನಬಿ
ಬೆಂಗಳೂರು,
ಜ. 21 : ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವ ಪ್ರಸ್ತಾಪವೂ ಇಲ್ಲ ಮತ್ತು ಅಂತಹ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಇಡೀ ಕರ್ನಾಟಕದ ಜನತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿಯಬೇಕೆಂದು ಬಯಸುತ್ತಿದ್ದಾಗ ರಾಜ್ಯಪಾಲ ಭಾರದ್ವಾಜ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆ ಹೇಗೆ ಉದ್ಭವಿಸುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವರು ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗುಲಾಂ ನಬಿ ಆಜಾದ್ ಹೇಳಿಕೆ ಹೇಳಿದ್ದಾರೆ. id="toptextpromo">ಕೆಪಿಸಿಸಿ
ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಆಜಾದ್, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪ್ರಜಾತಂತ್ರವನ್ನು ಅಣುಕಿಸುವ ರೀತಿಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆ. ಯಡಿಯೂರಪ್ಪ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನಕ್ಕಿರುವ ಗೌರವವನ್ನು ಉಳಿಸಿಕೊಳ್ಳಲಿ ಎಂದು ಟೀಕಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಆರೋಪ
ಬಂದ ತಕ್ಷಣ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅದೇ ಹಾದಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಅನುಸರಿಸಬೇಕು. ಯಡಿಯೂರಪ್ಪ ಕಾನೂನು, ಸಂಪ್ರದಾಯಗಳನ್ನು ಗಾಳಿಗೆ ತೂರಿದ್ದಾರೆ. ವಿಧಾನಸಭಾಧ್ಯಕ್ಷರನ್ನು ಮುಂದಿಟ್ಟುಕೊಂಡು ಕುರ್ಚಿ ಉಳಿಸಿಕೊಳ್ಳುವ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ. ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳಿಗೆ ವಿಶ್ವಾಸವಿಲ್ಲ. ಹೀಗಾಗಿ ಇದರ ವಿರುದ್ಧ ಎಲ್ಲ ಜಾತ್ಯತೀತ ಶಕ್ತಿಗಳು ಒಟ್ಟಾಗಿ ಹೋರಾಟ ನಡೆಸಬೇಕೆಂದು ಆಜಾದ್ ಕರೆ ನೀಡಿದ್ದಾರೆ.











Click it and Unblock the Notifications