ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ನಾಯಕರ ಭೇಟಿಗೆ ದೆಹಲಿಗೆ ಬಿಎಸ್ ವೈ

By Prasad
|
Google Oneindia Kannada News

Chief Minister BS Yeddyurappa
ಬೆಂಗಳೂರು, ಜ. 23 : ಜನವರಿ 22ರ ಬಂದ್ ನಿಂದಾಗಿ ರಾಜ್ಯಕ್ಕೆ 2 ಸಾವಿರ ಕೋಟಿ ರು. ನಷ್ಟವಾಗಿದೆ. ರಾಜ್ಯದ ಹಲವೆಡೆ ಸಾರ್ವಜನಿಕ ಆಸ್ತಿಪಾಸ್ತಿಗೆ ಭಾರೀ ಹಾನಿ ಆಗಿದೆ. ಆಸ್ತಿ ಹಾನಿ ಮರುಪಾವತಿ ಮಾಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ರಿಚ್ ಅರ್ಜಿ ಸಲ್ಲಿಸಲು ವಕೀಲರು ಯೋಚಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆಯಬೇಕಾಗಿದ್ದ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ಸ್ಥಗಿತಗೊಂಡಿದೆ.

ಇದಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಲುಗಾಡುತ್ತಿರುವ ಕುರ್ಚಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರೀ ಕಾರ್ಯಪ್ರವೃತ್ತರಾಗಿದ್ದಾರೆ. ತಮ್ಮ ವಿರುದ್ಧ ಮೊಕದ್ದಮೆ ಹೂಡಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಪ್ರತಿಯುದ್ಧವನ್ನೇ ಸಾರಿರುವ ಯಡಿಯೂರಪ್ಪನವರು ಇಂದು ದೆಹಲಿಗೂ ತೆರಳಿ ರಾಷ್ಟ್ರನಾಯಕರಿಗೆ ವರದಿ ಸಲ್ಲಿಸಲಿದ್ದಾರೆ. ವರಿಷ್ಠರೊಂದಿಗೆ ಮುಂದಿನ ನಡೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬೆಂಬಲಕ್ಕೆ ನಿಂತಿದ್ದರೂ ಎರಡೂವರೆ ವರ್ಷಗಳ ಆಡಳಿತ ಅವರಿಗೆ ಸಾಕಷ್ಟು ತಲೆನೋವು ತಂದಿದೆ. ಭೂಹಗರಣಗಳ ತನಿಖೆ ಮುಗಿದ ನಂತರ ಮೊಕದ್ದಮೆ ಹೂಡಲು ಅನುಮತಿ ನೀಡಬಹುದಾಗಿತ್ತು ಎಂದು ರಾಜ್ಯಪಾಲರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಬಳ್ಳಾರಿಯಲ್ಲಿ ಪ್ರತಿಭಟನೆ : ಶನಿವಾರ ಬಿಜೆಪಿ ಕರೆದಿದ್ದ ಬಂದ್ ವಿರೋಧಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಕ್ಕೆ ಅಪಾರ ಹಾನಿ ಸಂಭವಿಸಿದ್ದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಲೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ನಗರದ ರಾಯಲ್ ವೃತ್ತದ ಬಳಿ ಜಮಾಯಿಸಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಡಿ ರಸ್ತೆಯಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. [ಯಡಿಯೂರಪ್ಪ]

English summary
Karntaka Chief Minister is going to New Delhi to meet BJP leaders to explain about tussle between Karnataka Governor Hansraj Bharadwaj and Govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X