ಹಾಸನ ಜಿಲ್ಲೆಯಲ್ಲಿ ಗುಡಿಸಲು ಇರೋಲ್ಲ: ಸೋಮಣ್ಣ
ಹಾಸನ,
ಜ.27: ಜಿಲ್ಲೆಯನ್ನು ಗುಡಿಸಲು ರಹಿತ ಜಿಲ್ಲೆ ಎಂದು ಘೋಷಿಸಲು ಸರಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಮೊದಲ ಹಂತದಲ್ಲಿ ಮುಂದಿನ ತಿಂಗಳು 20 ಸಾವಿರ ಆಶ್ರಯ ಮನೆ ನೀಡಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ. ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾದ 62ನೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. id="toptextpromo">ಜಿಲ್ಲೆಯಲ್ಲಿ
ಹೆಚ್ಚಾಗಿರುವ ಕಾಡಾನೆ ಸಮಸ್ಯೆ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರದೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಕಂಡು ಹಿಡಿಯಲಾಗುವುದು. ಅಲ್ಲದೆ ಬೆಳೆಹಾನಿ ಮತ್ತು ಜೀವಹಾನಿಗೆ ತುತ್ತಾದ ಕುಟುಂಬಗಳಿಗೆ ಪರಿಹಾರದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. id='are-slot-1' class='oiad oi-axt oiadv'> id='top-searched-articles'>ಜಿಲ್ಲೆಯಲ್ಲಿನ
ನೀರಾವರಿ ಯೋಜನೆಗಳಿಂದ ಶೀತಪೀಡಿತ ಪ್ರದೇಶಗಳನ್ನು ಆದ್ಯತೆ ಮೇರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಪುನರ್ವಸತಿ ಪ್ರದೇಶಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು. ಬೇಲೂರು ತಾಲೂಕಿನ ಹಳೇಬೀಡು-ಮಾದೀಹಳ್ಳಿ ಹೋಬಳಿ ಜನತೆಗೆ ಯಗಚಿ ಯೋಜನೆಯಿಂದ ಏತ ನೀರಾವರಿ ಸೌಲಭ್ಯ ಕಲ್ಪಿಸಲು ತಾಂತ್ರಿಕ ಅಭಿಪ್ರಾಯ ಪಡೆಯಲಾಗುತ್ತಿದೆ. ಶೀಘ್ರವೇ ಸರಕಾರ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧವಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು. [ಹಾಸನ]











Click it and Unblock the Notifications