ಕೊಡಗಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ?
ಕುಶಾಲನಗರ,
ಜ.30: ಕೊಡಗು ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಇಲ್ಲಿನ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೊರಜಿಲ್ಲೆಯನ್ನು ಅವಲಂಭಿಸಬೇಕಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜನ್ನು ಕುಶಾಲನಗರದಲ್ಲಿ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಎ.ರಾಮದಾಸ್ ಅವರಿಗೆ ಮನವಿ ಮಾಡಿರುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದ್ದಾರೆ. id="toptextpromo">ಕುಶಾಲನಗರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೂ.40 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕೊಡಗು ವಿಭಾಗದ ವತಿಯಿಂದ ಕೈಗೊಂಡಿರುವ ಮಹಿಳಾ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ಸಂದರ್ಭ ಏರ್ಪಡಿಸಿದ್ದ ಸಮಾರಂಭದಲ್ಲಿ ಈ ವಿಷಯ ತಿಳಿಸಿದರು. id='are-slot-1' class='oiad oi-axt oiadv'> id='top-searched-articles'>ಜಿಲ್ಲೆಯಲ್ಲಿ
ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಿರಾಜಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ರೂ.53 ಕೋಟಿ, ಮಡಿಕೇರಿ ತಾಲ್ಲೂಕಿನ ರಸ್ತೆ ಕಾಮಗಾರಿಗೆ ರೂ.13.49 ಕೋಟಿ, ಸೋಮವಾರಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ರೂ.17.57 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು. [ಕೊಡಗು]











Click it and Unblock the Notifications