ಭಾರತೀಯ ವಿದ್ಯಾರ್ಥಿಗಳ ಕಾಲ್ಪಟ್ಟಿಗೆ ಕೃಷ್ಣ ಕಿಡಿಕಿಡಿ

SM Krishna
ಬೆಂಗಳೂರು, ಜ. 31 : ಅಮೆರಿಕದ ಟ್ರೈ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳ ಕಾಲಿಗೆ ಬಲವಂತವಾಗಿ ರೇಡಿಯೋ ಕಾಲರ್ ತೊಡಿಸಿರುವುದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೊಂದು ಅಮಾನವೀಯ ಕೃತ್ಯ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಉಗ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸಮಾವೇಶದ ನಂತರ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಮೆರಿಕದಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಪೋಷಕರು ಅತಂಕ ಪಡಬೇಕಾಗಿಲ್ಲ ಎಂದು ಕೃಷ್ಣ ಧೈರ್ಯ ತುಂಬಿದ್ದಾರೆ.

ಭಾರತೀಯ ವಿದ್ಯಾರ್ಧಿಗಳು ಅಪರಾಧಿಗಳಲ್ಲ. ಹೀಗಾಗಿ ರೇಡಿಯೋ ಕಾಲರ್ ಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೋರಲಾಗಿದೆ. ಘಟನೆ ನಂತರ ಭಾರತಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೂ ಕೇಂದ್ರ ಸರಕಾರ ಅಗತ್ಯ ನೆರವು ನೀಡಲಿದೆ. ಮುಖ್ಯವಾಗಿ ಆಂಧ್ರಪ್ರದೇಶದ ವಿದ್ಯಾರ್ಥಿಗಳು ಟ್ರೈವ್ಯಾಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಕೃಷ್ಣ ವಿವರಿಸಿದರು.

ಅಮೆರಿಕ ಸ್ಪಷ್ಟನೆ : ವಲಸೆ ಇಲಾಖೆಯ ಅಧಿಕಾರಿಗಳು ತೆಗೆದುಕೊಂಡಿರುವ ನಿರ್ಣಯದ ಬಗ್ಗೆ ತನಿಖೆ ನಡೆಸಲಾಗುವುದು. ಭಾರತೀಯ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅಮೆರಿಕ ಸರಕಾರ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+