ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದುರಂತ : ಮೃತರ ಕುಟುಂಬಕ್ಕೆ 1 ಲಕ್ಷ ರು. ಪರಿಹಾರ

By Mrutyunjaya Kalmat
|
Google Oneindia Kannada News

Shobha Karandlaje
ಬೆಂಗಳೂರು, ಫೆ. 2 : ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎಟಿಸಿ ಕಂಪನಿಗೆ ಸೇರಿದ ಫ್ಯಾಕ್ಟರಿ ಗೋಡೆ ಕುಸಿತ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ ಹಾಗೂ ಗಾಯಾಳುಗಳಿಗೆ 25 ಸಾವಿರ ರುಪಾಯಿ ಪರಿಹಾರವನ್ನು ಸರಕಾರ ಘೋಷಿಸಿದೆ.

ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಎಲ್ಲರೂ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಜುಗೇಶ್ ಸಾಥ್, ರಾಜೀವ ಶಾ, ಸತೀಶ್ ಶರ್ಮಾ, ಸಂಜೀವ, ರಾಜಾದೂರ್, ಫಾರೂಕ್ ಜಾಧವ ಹೆಸರುಗಳು ಮಾತ್ರ ಲಭ್ಯವಾಗಿವೆ. ಉಳಿದವರು ಹೆಸರು ತಿಳಿದು ಬಂದಿಲ್ಲ. ಸೋನು, ಸಂತೋಷ, ಪರವಾನಂದ ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಟಿಸಿ ಬ್ರಿಕ್ಸ್ ಕಂಪನಿ ಶ್ರೀನಿವಾಸ್ ಎಂಬುವವರಿಗೆ ಸೇರಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫ್ಯಾಕ್ಟರಿಯ ಗೋಡೆ ಇನ್ನೂರು ಅಡಿ ಉದ್ದವಿದ್ದು, ಇಪ್ಪತ್ತೈದು ಅಡಿ ಎತ್ತರವಿದೆ. ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಗೋಡೆ ಪಿಲ್ಲರ್ ಗಳ ಸಮೇತ ಬಿದ್ದಿದ್ದರಿಂದ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಜೆಸಿಬಿ ಯಂತ್ರವನ್ನು ತರಿಸಲಾಗಿದ್ದು, ಸಿಲುಕಿದವರನ್ನು ಪಾರುಮಾಡುವ ಯತ್ನ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸ್ ಪಡೆ ಮತ್ತು ಅಗ್ನಿಶಾಮಕ ದಳ ಮತ್ತು ಆಂಬುಲನ್ಸ್ ಧಾವಿಸಿದ್ದು, ಕಟ್ಟಡದ ಅವಶೇಷದಡಿ ಸಿಲುಕಿರುವ ಕಾರ್ಮಿಕರನ್ನು ಪಾರು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನಾ ಸ್ಥಳಕ್ಕೆ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋಡೆ ಕುಸಿದು ಅವಘಡ ಸಂಭವಿಸಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸುಮಾರು 9 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಉತ್ತರ ಭಾರತದವರು. ಮೃತರ ಕುಟುಂಬಕ್ಕೆ 1 ಲಕ್ಷ ಮತ್ತು ಗಾಯಗೊಂಡವರಿಗೆ 25 ಸಾವಿರ ರುಪಾಯಿ ಪರಿವಾರವನ್ನು ಘೋಷಿಸಲಾಗಿದೆ ಎಂದು ಅವರು ವಿವರಿಸಿದರು.

English summary
Energy Minister Shobha Karandlaje announces Rs.1 lakh compensation for death victims family and Rs 25,000 for those who are injured in wall collapsed incident in CK Palya of Bannerghatta Road, Bangalore on Wednesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X