ಪಂಕಜ್ ಜೈನ್ ಕೊಲೆ ವಿರುದ್ಧ ಒಗ್ಗಟ್ಟಾದ ಬಳ್ಳಾರಿ

ಬಳ್ಳಾರಿಯ ಬಡ್ಡಿ ವ್ಯಾಪಾರಿ, ಎಲೆಕ್ಟ್ರಿಕಲ್ ಅಂಗಡಿಯ ಪಂಕಜ್ ಜೈನ್‌ನನ್ನು ಫೆಬ್ರವರಿ 1ರ ರಾತ್ರಿ 9 ಗಂಟೆ ಸುಮಾರಿಗೆ ಅನಂತಪುರ ರಸ್ತೆಯಿಂದ ಅಪಹರಿಸಿದ್ದ ದುಷ್ಕರ್ಮಿಗಳು, ಕುಟುಂಬದ ಸದಸ್ಯರಿಂದ 7 ಲಕ್ಷ ರುಪಾಯಿ ಒತ್ತೆ ಹಣವನ್ನು ಫೆಬ್ರವರಿ 2ರಂದು ಪಡೆದಿದ್ದರು. ಆದರೂ, ಪಂಕಜ್ ಜೈನ್‌ನನ್ನು ಕೊಲೆ ಮಾಡಿದ್ದರು.
ಈ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ವೈಫಲ್ಯವನ್ನು ಎತ್ತಿಹಿಡಿದು ಬಳ್ಳಾರಿಯ ತೇರುಬೀದಿಯ ಜೈನ್ ದೇವಸ್ಥಾನದಿಂದ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಾರಂಭವಾದ ಮೌನ ಪ್ರತಿಭಟನೆಯಲ್ಲಿ ಬಳ್ಳಾರಿ ನಗರದ ಸಗಟು ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು ಸ್ವಯಂ ಪ್ರೇರಿತರಾಗಿ ವಹಿವಾಟು ಸ್ಥಗಿತಗೊಳಿಸಿ ಮೆರವಣಿಯಲ್ಲಿ ಪಾಲ್ಗೊಂಡರು. ಈ ಮೆರವಣಿಗೆಯಲ್ಲಿ ಜೈನ್ ಸಮುದಾಯದ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದು ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಇಡೀ ಮೆರವಣಿಗೆಯನ್ನು ಕಂಡ ಕೆಲ ವ್ಯಾಪಾರಿಗಳು, ಅಂಗಡಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸ್ವಯಂ ಪ್ರೇರೇಪಿತರಾಗಿ ರಸ್ತೆಗಿಳಿದು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರೇ ತಿಳಿಸಿದಂತೆ - ಪ್ರಕರಣ ಕುರಿತು ಐವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆದಿದೆ. ಬಂಧಿತರು ಇನ್ನೂ ಕೆಲ ವ್ಯಾಪಾರಿಗಳನ್ನು, ವಾಣಿಜ್ಯೋದ್ಯಮಿಗಳನ್ನು ಹಣಕ್ಕಾಗಿ ಅಪಹರಿಸಿ, ಕೊಲೆ ಮಾಡುವ ಸಂಚು ನಡೆಸಿದ್ದರು' ಎನ್ನುವ ವಿಚಾರವನ್ನು ದಾಖಲಿಸಿ, ನಗರದ ವ್ಯಾಪಾರಿಗಳು, ವಾಣಿಜ್ಯೋದ್ಯಮಿಳಿಗೆ ರಕ್ಷಣೆ ನೀಡಿ, ಭದ್ರತೆ ಒದಗಿಸಿ ಎಂದು ಕೋರಿದ್ದಾರೆ.
ಮತ್ತು ಪಂಕಜ್ ಜೈನ್‌ರನ್ನು ರಕ್ಷಿಸುವಲ್ಲಿ ಪೊಲೀಸರು ಸಕಾಲಿಕವಾಗಿ ಯೋಜನೆ ರೂಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪಂಕಜ್ ಜೈನ್ ಕೊಲೆಗೆ ಪೊಲೀಸ್ ವೈಫಲ್ಯವೇ ಕಾರಣ. ಪೊಲೀಸರು ಮಾಹಿತಿ ಸಿಕ್ಕ ಕೂಡಲೇ, ದೂರು ನೀಡಿದ ಕೂಡಲೇ ತನಿಖೆ ನಡೆಸಲು ಅನಗತ್ಯವಾಗಿ ಸಮಯ ವ್ಯರ್ಥ ಮಾಡಿದರು ಎಂದು ದೂರಿದ್ದಾರೆ.
ಬೆಂಬಲ : ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘ, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಸಗಟು ವ್ಯಾಪಾರಿಗಳು ಮೌನ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಬಳ್ಳಾರಿ ನಗರದ ಇತಿಹಾಸದಲ್ಲೇ ಈ ರೀತಿಯ ಮೌನ ಪ್ರತಿಭಟನೆ ನಡೆದಿರಲಿಲ್ಲ ಎನ್ನುವುದು ಅನೇಕರ ಅಭಿಪ್ರಾಯ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications