ಕ್ರಿಕೆಟ್ ಗೆ ಸೌರವ್ ಗಂಗೂಲಿ 'ಅಲ್ವಿದಾ'

ಬೆಂಗಳೂರಿನಲ್ಲಿ ನಡೆದ ಐಪಿಎಲ್ ಬಿಡ್ ಸಮಯದಲ್ಲಿ ಹರಾಜಾಗದಿದ್ದ ಗಂಗೂಲಿ ಅವರನ್ನು ಟೀಮ್ ಕೊಚ್ಚಿ ತಂಡ ಖರೀದಿಸಲು ಮುಂದಾಗಿತ್ತು. ಆದರೆ ಈ ಪ್ರಕ್ರಿಯೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಹಲವು ಫ್ರಾಂಚೈಸಿಗಳು ವಿರೋಧ ವ್ಯಕ್ತಪಡಿಸಿದ್ದವು. ಹಾಗಾಗಿ ಐಪಿಎಲ್ ಆಡಳಿತ ಮಂಡಳಿ ಗಂಗೂಲಿ ಮರು ಸೇರ್ಪಡೆಗೆ ಒಪ್ಪಿಗೆ ನೀಡಿರಲಿಲ್ಲ. ಐಪಿಎಲ್‌ನಲ್ಲಿ ಆಡುತ್ತೇನೆ ಎನ್ನುವ ನಿರೀಕ್ಷೆಗಳು ಹುಸಿಯಾದವು. ಆದ್ದರಿಂದ ದೇಶದಲ್ಲಿ ನಡೆಯುವ ಇತರ ಟೂರ್ನಿಗಳಲ್ಲಿ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.
1996ರಲ್ಲಿ ಕ್ರಿಕೆಟ್‌ನ ಕಾಶಿ ಎಂದೇ ಹೆಸರಾದ ಇಂಗ್ಲೆಂಡಿನ ಲಾರ್ಡ್ಸ್ ಮೈದಾನದಲ್ಲಿ ತಮ್ಮ ಮೊಟ್ಟಮೊದಲ ಟೆಸ್ಟ್ ಪಂದ್ಯದಲ್ಲಿಯೇ ಶತಕ ಗಳಿಸುವ ಮೂಲಕ ತಮ್ಮ ವೃತ್ತಿ ಜೀವನವನ್ನು ಭರ್ಜರಿಯಾಗಿ ಗಂಗೂಲಿ ಪ್ರಾರಂಭಿಸಿದ್ದರು. ಮ್ಯಾಚ್ ಫಿಕ್ಸಿಂಗ್ ಹಗರಣದ ನಂತರ 2000ದಲ್ಲಿ ತಂಡದ ನಾಯಕತ್ವ ವಹಿಸಿಕೊಂಡ ಗಂಗೂಲಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. ಗಂಗೂಲಿ ನಾಯಕರಾಗಿದ್ದ 49 ಟೆಸ್ಟ್ ಪಂದ್ಯಗಳಲ್ಲಿ ಭಾರತ 21 ಟೆಸ್ಟ್‌ಗಳಲ್ಲಿ ಜಯಗಳಿಸಿತ್ತು.
ವಿಡಿಯೋ:ಕ್ರಿಕೆಟ್ ಜಗತ್ತಿನ ದಾದಾ ವಿದಾಯ
100 ಟೆಸ್ಟ್ ಪಂದ್ಯಗಳನ್ನು ಆಡಿರುವ ಗಂಗೂಲಿ ಭಾರತದ ಏಳನೇ ಆಟಗಾರ. ಅಲ್ಲದೆ 300ಕ್ಕೂ ಹೆಚ್ಚಿನ ಏಕದಿನ ಪಂದ್ಯಗಳನ್ನು ಆಡಿ 10,000ಕ್ಕೂ ಹೆಚ್ಚಿನ ರನ್ ಗಳಿಸಿದ್ದಾರೆ. ತಂಡಕ್ಕೆ ಸ್ಫೂರ್ತಿ ನೀಡುವುದರಲ್ಲಿ ಹೆಚ್ಚಿನ ಗಮನ ವಹಿಸಿದ್ದ ಗಂಗೂಲಿ ಏಕದಿನದಲ್ಲಿ ಸಚಿನ್ ಜೊತೆ ಅತ್ಯಂತ ಹೆಚ್ಚಿನ ಶತಕದ ಜೊತೆಯಾಟ ಆಡಿದ ದಾಖಲೆಯನ್ನು ಹೊಂದಿದ್ದಾರೆ.
ಪ್ರಿನ್ಸ್ ಆಫ್ ಕೋಲ್ಕತ್ತಾಗೆ ಏನಾಯಿತು?: 07 .10 .2008 ರಂದು ಗಂಗೂಲಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದರು. ಕಳೆದ ಮೂರು ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಿದ್ದ ದಾದಾ ಅವರನ್ನು ಈ ಸಲ ಶಾರೂಖ್ ಖಾನ್ ನೇತೃತ್ವದ ನೈಟ್ ರೈಡರ್ಸ್ ಸಹಾ ಕೈಬಿಟ್ಟಿತ್ತು.
ತನ್ನ ನಾಯಕತ್ವದ ಅವಧಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲುವು ದಾಖಲಿಸಿದ್ದು, ಇಂಗ್ಲೆಂಡ್‌ನಲ್ಲಿ ನಡೆದ ನ್ಯಾಟ್‌ವೆಸ್ಟ್ ಏಕದಿನ ತ್ರಿಕೋನ ಸರಣಿಯಲ್ಲಿ ಗೆಲುವು ಸಾಧಿಸಿದ ಬಳಿಕ ಲಾರ್ಡ್ಸ್‌ನ ಡ್ರೆಸಿಂಗ್ ರೂಂನಲ್ಲಿ ತನ್ನ ಶರ್ಟು ಬಿಚ್ಚಿ ಗಾಳಿಯಲ್ಲಿ ತಿರುಗಿಸಿದ್ದು, 2003ರ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಫೈನಲ್‌ಗೇರಿಸಿದ್ದು, ಆ ಬಳಿಕ ಕೋಚ್ ಗ್ರೆಗ್ ಚಾಪೆಲ್ ಜೊತೆಗೆ ಬಾಂಧವ್ಯದಲ್ಲಿ ಬಿರುಕು ಸೃಷ್ಟಿ ಮಾಡಿಕೊಂಡಿದ್ದು ಗಂಗೂಲಿ ಕ್ರಿಕೆಟ್ ಜೀವನದ ಪ್ರಮುಖ ಹಂತಗಳೆನಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications