ಖಾನ್ ವಿರುದ್ಧ ಎಫ್‌ಐಆರ್: ಉಪಸಭಾಪತಿ ಅಮಾನತ್?

1998ರಿಂದ 2002ರವರೆಗೆ ರೆಹಮಾನ್ ಖಾನ್ ಈ ಬ್ಯಾಂಕ್‌ನ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ನಡೆದಿದ್ದ 102.02 ಕೋಟಿ ರು. ಹಣ ದುರುಪಯೋಗವು ಸಹಕಾರ ಇಲಖೆ ಅಧಿಕಾರಿಗಳ ತನಿಖೆಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ ರೆಹಮಾನ್ ಖಾನ್ ಸೇರಿದಂತೆ 8 ಮಂದಿ ಹಾಗೂ ಒಂದು ಸಂಸ್ಥೆ ವಿರುದ್ಧ ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದ್ದಾರೆ.
ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಶೆಹರ್‌ಬಾನು ಅವರ ತನಿಖಾ ವರದಿ ಆಧರಿಸಿ ರೆಹಮಾನ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 420 (ವಂಚನೆ), 106 (ನಂಬಿಕೆ ದ್ರೋಹ) 109 ಹಾಗೂ 120 ಬಿ ಅನುಸಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೂರ್ಣ ವಿವರಗಳನ್ನು ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಎಂದು ಸಚಿವರು ಹೇಳಿದರು. ವಂಚನೆ, ನಂಬಿಕೆ ದ್ರೋಹ ಸೇರಿದಂತೆ ವಿವಿಧ ಆರೋಪಗಳಡಿ ಖಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರೆಹಮಾನ್ ಖಾನ್ ರ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಕುತ್ತು ಬರುವ ನಿರೀಕ್ಷೆಯಿದೆ.
ಏನಿದು ಪ್ರಕರಣ: ಅಮಾನತ್ ಬ್ಯಾಂಕ್ 1977ರಲ್ಲಿ ಸ್ಥಾಪನೆಯಾಗಿದ್ದು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದು ರಾಜ್ಯದಲ್ಲಿ ಪ್ರಥಮ ಷೆಡ್ಯೂಲ್ ಬ್ಯಾಂಕ್ ಆಗಿದೆ. ಬ್ಯಾಂಕ್‌ನ ನರಸಿಂಹರಾಜ ರಸ್ತೆ ಶಾಖೆಯಲ್ಲಿ 98 ರಿಂದ 2002ರವರೆಗೆ ನಡೆದ ಅವ್ಯವಹಾರಗಳನ್ನು ಆರ್‌ಬಿಐ ಪತ್ತೆಹಚ್ಚಿತ್ತು. 48 ಬೇನಾಮಿ ಸಾಲಗಳ ಮೊತ್ತವೇ 57.66 ಕೋಟಿ ರು. ಭದ್ರತೆ ಇಲ್ಲದ ಸಾಲಗಳ ಮೊತ್ತ 102.02 ಕೋಟಿ ರು. ದುರುಪಯೋಗ ನಡೆದಿರುವುದು ಸಹಕಾರ ಕಾಯ್ದೆಯಡಿ ನಡೆದ ವಿಚಾರಣೆಯಿಂದ ಸಾಬೀತಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನ ಬಾಜಿ ಅಧ್ಯಕ್ಷ ರೆಹಮಾನ್ ಖಾನ್ ಅವರು ಕಳೆದ ವರ್ಷ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರ್ 18ರಂದು ಆದೇಶ ನೀಡಿದ್ದ ಹೈಕೋರ್ಟ್, ನಾಲ್ಕು ವಾರದೊಳಗೆ ರಿಟ್ ಅರ್ಜಿದಾರರು ಸಹಕಾರ ಸಂಘಗಳ ಜಂಟಿ ನಿಬಂಧಕರ ಮುಂದೆ ಮನವಿ ಸಲ್ಲಿಸತಕ್ಕದ್ದು ಎಂದು ಸೂಚಿಸಿತು.
ಅದಲ್ಲದೆ, ಈ ಮನವಿಗಳ ಬಗ್ಗೆ ಸಹಕಾರ ಸಂಘಗಳ ಜಂಟಿ ನಿಬಂಧಕರು ನ್ಯಾಯಾಲಯದ ಆದೇಶದ ಮೂರು ತಿಂಗಳೊಳಗೆ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿತು. ಈ ಆದೇಶದನ್ವಯ ಈ ತಿಂಗಳ 18ಕ್ಕೆ ಮೂರು ತಿಂಗಳ ಸಮಯ ಮೀರಿತ್ತಿತ್ತು. ಹೀಗಾಗಿ ಬುಧವಾರ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications