ಬೆಂಗಳೂರಿನ ಶಾಲೆಗೆ ಪ್ರೇಮ ಬಾಣ ನಾಟಿದೆ !

ಎಲ್ಲಾ ಸರಿ, ಪ್ರೇಮಿಗಳ ದಿನಾಚರಣೆ ಏಕೆ? : ಮಕ್ಕಳ ನಡುವೆ ಪ್ರೀತಿ, ಶಾಂತಿಯ ವಾತಾವರಣ ಸೃಷ್ಟಿಸಲು ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದೇವೆ. ಮಕ್ಕಳ ಪೋಷಕರು, ಸ್ನೇಹಿತರು ಸಹಾ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಲ್ಲಿ ಸಾಮಾಜಿಕ ಕಾಳಜಿ ಬೆಳೆಸಲು ವಂತಿಗೆ ಸಂಗ್ರಹ ಮಾಡಲಾಗುತ್ತದೆ ಪಡುತ್ತಾರೆ ಎಂದು Trio World School ಶಾಲಾ ಆಡಳಿತ ಮಂಡಳಿಯವರು ಹೇಳುತ್ತಾರೆ.
ನಮ್ಮ ಶಾಲೆಯಲ್ಲಿ ಸುಮಾರು 35 ವಿವಿಧ ದೇಶಗಳಿಂದ ಬಂದಿರುವ ವಿದ್ಯಾರ್ಥಿಗಳಿದ್ದಾರೆ. ವ್ಯಾಲೆಂಟೈನ್ಸ್ ಡೇ ವಿದ್ಯಾರ್ಥಿಗಳನ್ನು ಒಗ್ಗೂಡಿಸಲು ಸಹಕಾರಿಯಾಗಿದೆ. ವಸ್ತು ಪ್ರದರ್ಶನ ಹಾಗೂ ಮಾರಾಟ, ವಂತಿಗೆಯಿಂದ ಸಂಗ್ರಹವಾದ ಹಣವನ್ನು ಸೀಡ್ಸ್ ಹೆಸರಿನ ಫೌಂಡೇಷನ್ ಗೆ ನೀಡಲಾಗುತ್ತದೆ. ಈ ಫೌಂಡೇಷನ್ ಮೂಲಕ ನಿರ್ಗತಿಕ ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿ ಮಾಡಿಕೊಡಲಾಗುತ್ತದೆ.
ಮುಕ್ತ ಸಮಾಜ ನಿರ್ಮಾಣ: ಪ್ರೇಮಿಗಳ ದಿನದಂದು ಶಾಲಾ ಮಕ್ಕಳು ಮುಕ್ತ ಮನಸ್ಸಿನಿಂದ ಪ್ರೀತಿಯನ್ನು ಹಂಚುಕೊಂಡಿದ್ದಾರೆ. ಚಾಕಲೋಟ್, ಹೂಗುಚ್ಛ, ಶುಭಾಶಯ ಪತ್ರಗಳು ಬಗೆ ಬಗೆ ಗಿಫ್ಟ್ ಗಳ ವಿನಿಮಯ ಜೋರಾಗಿ ನಡೆದಿದೆ.
ಮಕ್ಕಳು ಪ್ರೀತಿ ಪ್ರೇಮ ಎಂದು ಚಿಕ್ಕ ವಯಸ್ಸಿನಲ್ಲೇ ಮಾತಾಡಿ, ಹಬ್ಬ ಆಚರಿಸುತ್ತಿರುವುದು ಅವರ ಪೋಷಕರಿಗೂ ತಿಳಿದಿದೆ. ಬದಲಾಗಿರುವ ಕಾಲಕ್ಕೆ ತಕ್ಕಂತೆ ಮಕ್ಕಳ ಆದ್ಯತೆ ಹಾಗೂ ಅವಶ್ಯಕತೆಗೆ ಪೋಷಕರು ಸಾಥ್ ನೀಡುತ್ತಿದ್ದಾರೆ. ತ್ವರಿತ ಗತಿಯಲ್ಲಿ ಎಲ್ಲವನ್ನೂ ಕಲಿಯಬಲ್ಲ ಮಕ್ಕಳಿಗೆ ಪ್ರೀತಿ, ಪ್ರೇಮದ ವಿಷಯದಲ್ಲಿ ಯಾಕೆ ನಿರ್ಬಂಧ ವಿಧಿಸಬೇಕು, ಯಾವುದೂ ಸರಿ, ಯಾವುದೂ ತಪ್ಪು ಎಂಬ ನಿರ್ಣಯವನ್ನು ಚಿಕ್ಕಂದಿನಿಂದಲೇ ಕಲಿಯಬೇಕಾದ್ದು ಅವಶ್ಯ ಎಂದು ಪೋಷಕರು ಹೇಳುತ್ತಾರೆ. ಒಟ್ಟಿನಲ್ಲಿ ಬೆಂಗಳೂರು ಪ್ರಕಾಶಿಸುತ್ತಿದೆ. ಬಹಳ ಮುಂದುವರೆದಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications