• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇ ಸಿಟಿ ಬಳಿ ಮತ್ತೆ ಸಾಮೂಹಿಕ ಅತ್ಯಾಚಾರ

By Mahesh
|
ಬೆಂಗಳೂರು, ಫೆ. 12: ಬೆಂಗಳೂರು ಹೊರವಲಯದ ಹೊಸೂರು ರಸ್ತೆಯಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಗೃಹಿಣಿಯೊಬ್ಬರನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

6 ಮಂದಿ ದುಷ್ಕರ್ಮಿಗಳು ಬಲವಂತವಾಗಿ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಬೇಗೂರು ಸಮೀಪದ ನಿರ್ಜನ ಪ್ರದೇಶವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ವಿಜಯನಗರ ನಿವಾಸಿ ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಮೊಕದ್ದಮೆ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಉದಯ್ ಕುಮಾರ್, ಮಧು, ರೆಡ್ಡಿ, ಬಸವರಾಜು, ಸಂತೋಷ್, ರಂಜಿತ್ ಎಂಬ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಸಿಕ್ಕಿಬಿದ್ದ ಪಡ್ಡೆ ಹುಡಗರಲ್ಲಿ ಒಬ್ಬ ಪ್ರಭಾವಿ ರಾಜಕಾರಣಿಯ ಸಂಬಂಧಿಕ ಎನ್ನಲಾಗಿದ್ದು, ಪ್ರಕರಣ ಮುಚ್ಚಿ ಹಾಕುವ ಪಯತ್ನಗಳು ನಡೆದರೂ, ರಾಜಕಾರಣಿಯ ಮಾತಿನಂತೆ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಆಗುತ್ತಿದೆ ಕ್ರೈಂ ಸಿಟಿ: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ರೀತಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ತೀರಾ ಇತ್ತೀಚೆಗೆ ಜಾರ್ಖಂಡ್ ಮೂಲದ ಎಂಬಿಎ ಪದವೀಧರೆಯನ್ನು ಕಿಡ್ನಾಪ್ ಮಾಡಿ ಇದೇ ರೀತಿ ದೌರ್ಜನ್ಯ ನಡೆಸಲಾಗಿತ್ತು. ಬ್ಯಾಂಕ್ ಎಟಿಎಂ ದರೋಡೆ, ಪಾದಚಾರಿಗಳಿಂದ ಹಣ ಸುಲಿಗೆ, ಟೆಕ್ಕಿಗಳ ಸಾವಿನ ಸರಣಿ ಜೊತೆಗೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದು ಸುತ್ತಮುತ್ತಲಿನ ನಾಗರಿಕರಿಗೆ ಆತಂಕ ತಂದಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Six persons were arrested for allegedly gang raping a young woman from Vijaynagar at Begur in Electronics City Police station limit. Crime rate is increasing in alarming rate in electronic city.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more