ವಿಶ್ವಕನ್ನಡ ಸಮ್ಮೇಳನಕ್ಕೆ 7.16 ಕೋಟಿ ಅನುದಾನ

Minister Suresh Kumar
ಬೆಂಗಳೂರು, ಫೆ.22: ಮುಂದಿನ ತಿಂಗಳು 11,12 ಮತ್ತು 13 ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಗಾಗಿ 7.16 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸಮ್ಮೇಳನದ ಸಿದ್ಧತೆ ಪರಿಶೀಲನೆ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆಸ್ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಮ್ಮೇಳನದ ಅಂಗವಾಗಿ ನಗರವನ್ನು ಸ್ವಚ್ಛಗೊಳಿಸಲು ಮತ್ತು ಸಿಂಗಾರ ಮಾಡಲು ರಾಜ್ಯ ಹಣಕಾಸು ಆಯೋಗದಿಂದ 7.16 ಕೋಟಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.

ಬೆಳಗಾವಿ ನಗರಕ್ಕೆ ಇದೊಂದು ಐತಿಹಾಸಿಕ ಸಂದರ್ಭವಾಗಿದ್ದು, ಈ ವಿಶ್ವಕನ್ನಡ ಸಮ್ಮೇಳನ ಜಾಗತಿಕ ಮಟ್ಟದಲ್ಲಿ ಸ್ಮರಣೀಯವನ್ನಾಗಿ ಮಾಡಲು ಅಭೂತ ಪೂರ್ವ ರೀತಿಯಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಜೆ ಆಯಾ ದಿನದ ಕಾರ್ಯಪ್ರಗತಿಯನ್ನು ಪರಿಶೀಲಿಸಲು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಪ್ರತಿದಿನ ಸಂಜೆ ಸಮ್ಮೇಳನ ಸಿದ್ಧತೆ ಹಾಗೂ ಸ್ವಚ್ಛತಾ ಕಾಮಗಾರಿಗಳ ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ ಎಂದರು.

ಸ್ವಚ್ಛಗೊಂಡ ಕುಂದಾನಗರಿ: ಬೆಳಗಾವಿ ನಗರಾದ್ಯಂತ ರಸ್ತೆಗಳ ಹೊಂಡಗಳನ್ನು ಮುಚ್ಚಲು, ಕೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಲು ಸೂಚಿಸಲಾಗಿದೆ. ನಗರವನ್ನು ಸಮ್ಮೇಳನದ ಸಮಯದಲ್ಲಿ ಸ್ವಚ್ಛವಾಗಿಡಲು ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ಜೊತೆಗೆ ಕಸ ಸಂಗ್ರಹಣೆಗೆ ವಾಹನಗಳನ್ನು ದೊಡ್ಡ ಸಂಖ್ಯೆಯಲ್ಲಿ ನಿಯೋಜಿಸಲಾಗುತ್ತಿದೆ.

ಉಳಿದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು, ಸಮ್ಮೇಳನದಲ್ಲಿ ಸುಮಾರು 50,000 ಅತಿಥಿಗಳಿಗೆ ವಸತಿ ಸೌಲಭ್ಯ. ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಬೆಳಗಾವಿ ನಗರದಲ್ಲಿ 24 ವೃತ್ತಗಳನ್ನು ಗುರುತಿಸಲಾಗಿದ್ದು, ಇವುಗಳನ್ನು ಕನ್ನಡತನವನ್ನು ಬಿಂಬಿಸುವಂತೆ ಅಲಂಕರಿಸಲಾಗವುದು. ಬೀದಿ ದೀಪ, ಪಾದಚಾರಿ ಮಾರ್ಗ ಸ್ವಚ್ಛತೆ, ಸುರಕ್ಷತಾ ಕ್ರಮಗಳು, ಈ ಎಲ್ಲಾ ಅಂಶಗಳ ಬಗ್ಗೆ ಸುದೀರ್ಘವಾಗಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಮಾಲೋಚನೆ ನಡೆಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ತಿಳಿಸಿದರು. [ಬೆಳಗಾವಿ ಸಮ್ಮೇಳನ ಲೇಖನಗಳು]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+