ಮೈಸೂರು ಚಾಮುಂಡಿಗೆ ಶರಣೆಂದ ಜಯಲಲಿತಾ

Jayalalitha in Chamundi hills, Mysore
ಮೈಸೂರು, ಫೆ.25: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಿ ಜೆ.ಜಯಲಲಿತಾ ಗುರುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯಲಲಿತಾ ತಮ್ಮ ಹುಟ್ಟು ಹಬ್ಬದ ದಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವುದು ವಾಡಿಕೆ. ಆದರೆ, ಕಳೆದ ಐದು ವರ್ಷದಿಂದ ದೇವಸ್ಥಾನಕ್ಕೆ ಭೇಟಿ ಕೊಡಲು ಸಾಧ್ಯವಾಗಿರಲಿಲ್ಲ. ಈ ಐದು ವರ್ಷದಲ್ಲಿ ಇವರ ಆಪ್ತರಾದ ಶಶಿಕಲಾ ಅವರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಇವರ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಿದ್ದರು.

ಬೆಳಗ್ಗೆ 11:45ಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಯಲಲಿತಾ ನೇರ ಚಾಮುಂಡಿ ಬೆಟ್ಟಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಝಡ್ ಗ್ರೂಪ್ ಭದ್ರತೆಯೊಂದಿಗೆ ಆಗಮಿಸಿದ ಜಯಲಲಿತಾ ನಂತರ ಬುಲೆಟ್ ಪ್ರೂಫ್ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಪಯಣ ಬೆಳೆಸಿದರು.

ಈ ನಡುವೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೆಚ್ಚು ಮಾತನಾಡಲು ನಿರಾಕರಿಸಿದ ಜಯಲಲಿತಾ, ತಮಿಳುನಾಡು, ಕರ್ನಾಟಕ ನೆರೆ ರಾಜ್ಯಗಳಾಗಿದ್ದು ಇಲ್ಲಿನ ಜನರು ಶಾಂತಿ, ಸ್ನೇಹದಿಂದ ಬಾಳ್ವೆ ನಡೆಸುತ್ತಿದ್ದಾರೆ ಎಂದಷ್ಟೇ ಹೇಳಿ ನಿರ್ಗಮಿಸಿದರು. ಚಾಮುಂಡಿ ಬೆಟ್ಟದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಕೋಮಲವಳ್ಳಿಯಲ್ಲಿ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜೆ ಜಯಲಲಿತಾ ಜನನ. ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ವಿದ್ಯಾಭ್ಯಾಸ. ನಂತರ ತಾಯಿ ಸಂಧ್ಯಾ ಜೊತೆ ತಮಿಳು ನಾಡಿಗೆ ವಲಸೆ. ಬಹು ಭಾಷಾ ನಟಿ, ರಾಜಕಾರಣಿ, ಜೆ ಜಯಲಲಿತಾ 1991-96ರಲ್ಲಿ ಎಐಎಡಿಎಂಕೆ ಪಕ್ಷದ ಸಾರಥ್ಯದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಕಾರ್ಯ ನಿರ್ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+