ಮಡಿಕೇರಿಯಲ್ಲಿ ಬಂದ್: ನಿಷೇಧಾಜ್ಞೆ ಜಾರಿ

ಶ್ರೀಹನುಮದ್ ಶಕ್ತಿ ಜಾಗರಣ ಆಭಿಯಾನದ ವತಿಯಿಂದ ನಿನ್ನೆ ಹಿಂದೂ ಸಮಾಜೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಭವ್ಯ ಮೆರವಣಿಗೆ ನಗರದಲ್ಲಿ ನಡೆಯಿತು. ಮೆರವಣಿಗೆ ಹಾದು ಹೋಗುವ ಮಾರ್ಗದಲ್ಲಿರುವ ಅಂಗಡಿಯನ್ನು ಮುಚ್ಚಲಾಗಿತ್ತು. ಆದರೆ ಒಂದು ಕೋಮಿನವರು ಅಂಗಡಿಯನ್ನು ಮುಚ್ಚದೆಯಿದ್ದಾಗ ಅಂಗಡಿಗಳ ಮೇಲೆ ಕಲ್ಲು ತೂರಾಟವೂ ನಡೆದಿತ್ತು. ಇದರಿಂದ ನಗರದಲ್ಲಿ ಸ್ವಲ್ಪ ಬಿಗುವಿನ ವಾತಾವರಣ ಉಂಟಾಗಿತ್ತಾದರೂ ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ಪರಿಸ್ಥಿತಿ ತಹಬದಿಗೆ ಬಂದಿತ್ತು.
ಈ ಹಿನ್ನಲೆಯಲ್ಲಿ ಘಟನೆಯನ್ನು ಖಂಡಿಸಿ ಕೊಡಗು ಮುಸ್ಲಿಂ ಹಿತರಕ್ಷಣಾ ಸಮಿತಿ ಬಂದ್ಗೆ ಕರೆ ನೀಡಿದ ಹಿನ್ನಲೆಯಲ್ಲಿ ಇಂದು ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳಿಂದ ಸಂತೆಗೆಂದು ಬಂದಿದ್ದವರು ಪರದಾಡುವಂತಾಯಿತು. ಮಾರುಕಟ್ಟೆಗೆ ವ್ಯಾಪಾರಿಗಳು ಬಾರದ ಹಿನ್ನಲೆಯಲ್ಲಿ ಬಿಕೋ ಎನ್ನುತ್ತಿತ್ತು.
ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮಡಿಕೇರಿ ನಗರದ ಎಲ್ಲಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ಸೋಮವಾರ(ಫೆ.28)ದವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications