ಮೈಸೂರಿನಲ್ಲಿ ಸಂಸದ ವಿಶ್ವನಾಥ್ ಕಚೇರಿಗೆ ಮುತ್ತಿಗೆ
ಮೈಸೂರು, ಫೆ. 26 : ಮೈಸೂರಿನ ಲೋಕನಾಯಕನಗರದಲ್ಲಿ ನೆಲೆಸಿರುವ ಕುಟುಂಬಗಳನ್ನು ಯಾವುದೇ ರೀತಿಯ ನೊಟೀಸ್ ನೀಡದೆ ಜಿಲ್ಲಾಡಳಿತ ತೆರವುಗೊಳಿಸಲಾಗುತ್ತಿದ್ದು ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಸಂಸದ ಎಚ್. ವಿಶ್ವನಾಥ್ ಅವರ ಕಚೇರಿಗೆ ಮುತ್ತಿಗೆ ಹಾಕಿದ ನಿವಾಸಿಗಳು ಬಳಿಕ ಮನವಿ ಸಲ್ಲಿಸಿದರು.
ಸುಮಾರು 40 ವರ್ಷದ ಹಿಂದೆ ವಿಶ್ವನಾಥ್ ಎಂಬುವರು ಸುಮಾರು 60 ನಿವೇಶನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ ಹಲವರು ಮನೆಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಜಿಲ್ಲಾಡಳಿತ ಈ ಜಾಗ ಸರ್ಕಾರಕ್ಕೆ ಸೇರಿದೆ ಎಂಬ ಕಾರಣ ನೀಡಿ ಇಲ್ಲಿರುವ ಕೆಲವು ಮನೆಗಳನ್ನು ತೆರವುಗೊಳಿಸಿದೆ. ಇದರಿಂದ ಆ ಕುಟುಂಬಗಳು ಸೂರು ಕಳೆದುಕೊಂಡು ಬೀದಿಗೆ ಬಿದ್ದಿವೆ.
ಯಾವುದೇ ರೀತಿಯ ನೊಟೀಸ್ ನೀಡದೆ ಮನೆ ತೆರವುಗೊಳಿಸಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮದಿಂದ ನಿವಾಸಿಗಳು ಆತಂಕಗೊಂಡಿದ್ದಾರಲ್ಲದೆ, ಸೂರು ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿ ಒದಗಿಬಂದಿರುವುದರಿಂದ ಭಯಭೀತರಾಗಿದ್ದಾರೆ. ಸದ್ಯಕ್ಕೆ ಯಾರಿಗೂ ಕಷ್ಟವನ್ನು ಹೇಳಿಕೊಳ್ಳಲಾಗದ ಪರಿಸ್ಥಿತಿ ಎದುರಾಗಿದೆ.
ಕ್ಷೇತ್ರದ ಶಾಸಕ ಶಂಕರಲಿಂಗೇಗೌಡರು ಅನರ್ಹಗೊಂಡಿದ್ದಾರೆ. ಉಸ್ತುವಾರಿ ಸಚಿವರಾದ ರಾಮದಾಸ್‌ರವರು ಕೈಗೆ ಸಿಗುತ್ತಿಲ್ಲ. ಜಿಲ್ಲಾಧಿಕಾರಿ ಹರ್ಷಗುಪ್ತಾರವರು ತಮ್ಮ ಮನವಿಯನ್ನು ಸ್ವೀಕರಿಸುತ್ತಿಲ್ಲ ಎಂದು ತಮ್ಮ ಅಳಲನ್ನು ನಿವಾಸಿಗಳು ವಿಶ್ವನಾಥ್‌ರವರ ಮುಂದೆ ತೋಡಿಕೊಂಡರು. ಇದೇ ಸಂದರ್ಭ ನೊಂದ ಕೆಲವರು ತಮ್ಮೊಂದಿಗೆ ತಂದಿದ್ದ ವಿಷವನ್ನು ಸೇವಿಸಿ ಆತ್ಮಹತ್ಯೆಗೂ ಮುಂದಾದರು. ಸಕಾಲದಲ್ಲಿ ಆಗಮಿಸಿದ ನಜರ್‌ಬಾದ್ ಠಾಣೆ ಪೊಲೀಸರು ಅದನ್ನು ವಿಫಲಗೊಳಿಸಿದರು. ಕೆಲವರು ವಿಶ್ವನಾಥ್‌ರವರ ಕಾಲಿಗೆ ಬಿದ್ದು ತಮ್ಮ ಮನೆಗಳನ್ನು ತೆರವುಗೊಳಿಸದಂತೆ ಬೇಡಿಕೊಳ್ಳುತ್ತಿದ್ದ ದೃಶ್ಯವೂ ಕಂಡು ಬಂತು.
ಮನವಿ ಸ್ವೀಕರಿಸಿದ ವಿಶ್ವನಾಥ್‌ರವರು ಸಂಬಂಧಿಸಿದವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರಲ್ಲದೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸದರಾದರೂ ಸಾಧ್ಯವಾಗಲಿಲ್ಲ.
ಆಕ್ರೋಶ : ಜಿಲ್ಲಾಧಿಕಾರಿ ಹರ್ಷಗುಪ್ತಾರವರು ಉದ್ದಟತನದಿಂದ ವರ್ತಿಸುತ್ತಿದ್ದು, ಬಡವರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಆರೋಪಿಸಿದರು. ನಾವು ನೀಡುವ ಮನವಿಯನ್ನು ಪರಿಶೀಲಿಸದೆ ಕಸದಬುಟ್ಟಿಗೆ ಹಾಕುತ್ತಾರೆ. ಇಂತಹ ಜಿಲ್ಲಾಧಿಕಾರಿಯನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications