ಕೆಂಪೇಗೌಡ ಅಂತಾರಾಷ್ಟ್ರೀಯ ವಿ. ನಿಲ್ದಾಣ ಟೇಕ್ಆಫ್
ಬೆಂಗಳೂರು,
ಮಾ. 8: ಬೆಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರಕಾರ ನಿರ್ಧಾರ ತೆಗೆದುಕೊಂಡಿದೆ. ನಾನಾ ಹೆಸರುಗಳನ್ನು ಸೂಚಿಸಿ ವಿವಿಧ ಸಂಘಟನೆಗಳು ಬೇಡಿಕೆ ಸಲ್ಲಿಸುತ್ತಿದ್ದರಿಂದ ಬಿಐಎಎಲ್ ನಾಮಕರಣ ವಿವಾದದ ಗೂಡಾಗಿತ್ತು. ಆದರೆ ಸರಕಾರ ಇದೀಗ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೆಂಪೇಗೌಡ ಹೆಸರು ನಿಕ್ಕಿಯಾಗಿದೆ. ಕೇಂದ್ರ ಸರಕಾರ ಔಪಚಾರಿಕವಾಗಿ ಈ ಹೆಸರನ್ನು ಅಂತಿಮಗೊಳಿಸುವುದಷ್ಟೇ ಬಾಕಿಯಿದೆ. id="toptextpromo">ಹಾಗೆ
ನೋಡಿದರೆ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡಬೇಕು ಎಂಬ ಬೇಡಿಕೆ ವ್ಯಾಪಕವಾಗಿತ್ತು. ಕಳೆದ ವಾರವಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಶೀಘ್ರವೇ ಸೂಕ್ತ ನಿರ್ಣಯ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಕೇಂದ್ರ ಸರಕಾರಕ್ಕೆ ಈ ನಿಟ್ಟಿನಲ್ಲಿ ತಕ್ಷಣ ಶಿಫಾರಸು ಮಾಡಿ ಒತ್ತಾಯಿಸಲು ತೀರ್ಮಾನಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಬೆಂಗಳೂರು
ನಿರ್ಮಾತೃ ಕೆಂಪೇಗೌಡರ 500 ವಾರ್ಷಿಕೋತ್ಸವ ಸಂದರ್ಭದಲ್ಲಿ ಬಿಐಎಎಲ್ ಮರುನಾಮಕರಣಗೊಳ್ಳುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ತುಮಕೂರಿನಿಂದ ಬೆಂಗಳೂರಿನ ತನಕ 64 ಕಿ.ಮೀ. ಉದ್ದದ ನ್ಯಾಷನಲ್ ಹೈವೇಗೆ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿಡುವಂತೆ ಕೇಂದ್ರವನ್ನು ಒತ್ತಾಯಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.











Click it and Unblock the Notifications