ಮಾಜಿ ಸಚಿವ ಎಚ್.ಸಿ. ಶ್ರೀಕಂಠಯ್ಯ ನಿಧನ
ಬೆಂಗಳೂರು,
ಮಾ. 12: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ. ಶ್ರೀಕಂಠಯ್ಯ (87) ಅವರು ಶನಿವಾರ ಬೆಳಗ್ಗೆ 5 ಗಂಟೆಗೆ ವಿಧಿವಶರಾದರು. ಅವರು ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದಾಗಿ ನಗರದ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ರೀಕಂಠಯ್ಯ ಅವರ ದೇಹವನ್ನು ಸದಾಶಿವನಗರದ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಮಧ್ಯಾಹ್ನ ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. id="toptextpromo">ಅಣ್ಣಯ್ಯ
ಎಂದೇ ಜನಪ್ರಿಯರಾಗಿದ್ದ ಶ್ರೀಕಂಠಯ್ಯ ಅವರ ಅಂತ್ಯಕ್ರಿಯೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಸ್ವಗ್ರಾಮದಲ್ಲಿ ಭಾನುವಾರ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ. ಹಾಸನ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶ್ರೀಕಂಠಯ್ಯ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವಾರು ಮುಖಂಡರು ಕಂಬನಿಗರೆದಿದ್ದಾರೆ. id='are-slot-1' class='oiad oi-axt oiadv'> id='top-searched-articles'>2004ರಲ್ಲಿ
ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀಕಂಠಯ್ಯ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ಸೋತಿದ್ದರು. ಅವರ ಪುತ್ರ ಎಚ್.ಎಸ್. ವಿಜಯಕುಮಾರ್, ಸೊಸೆ ರಾಜೇಶ್ವರಿ, ಅವರ ತಂದೆ ಜಿ. ಪುಟ್ಟಸ್ವಾಮಿ ಗೌಡ ಸೇರಿದಂತೆ ಶ್ರೀಕಂಠಯ್ಯ ಅವರ ಕುಟುಂಬ ರಾಜಕೀಯ ಮನೆತನದ್ದಾಗಿತ್ತು. ಕಾಂಗ್ರೆಸ್ ರಾಜಕಾರಣದಲ್ಲಿ ಮಿಂಚಿದ್ದ ಅವರು ಕೊನೆಗೆ ಬಿಜೆಪಿ ಪಕ್ಷ ಸೇರಿದ್ದರು.











Click it and Unblock the Notifications