ಮಾ.14 ರಿಂದ ಸರ್ಕಾರಿ ವೈದ್ಯರ ಮುಷ್ಕರ

Karnataka govt doctors hunger strike
ಬೆಂಗಳೂರು, ಮಾ.12: ಸರ್ಕಾರಿ ವೈದ್ಯರು ಮತ್ತೆ ಬೀದಿಗಿಳಿದು ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧರಣಿ ಕೂಡಲು ನಿರ್ಧರಿಸಿದ್ದಾರೆ. ಮಾರ್ಚ್ 14ರಿಂದ ಪ್ರಥಮ ಹಂತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವ ವೈದ್ಯರು, ಮುಂದಿನ ದಿನಗಳಲ್ಲಿ ಕೆಲಸಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಹಾಗಾಗಿ ಮುಂದಿನವಾರ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಲಿದ್ದು, ರೋಗಿಗಳಿಗೆ ಪರದಾಟ ತಪ್ಪಿದ್ದಲ್ಲ.

ಗುತ್ತಿಗೆ ಆಧಾರದ ಮೇಲೆ ಮಾಡಿದ ಸೇವೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ನಮ್ಮ ಸೇವೆ ಪರಿಗಣಿಸಲಾಗುತ್ತಿತ್ತು. ಆದರೆ, ಈಗ ಏಕಾಏಕಿ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಸರ್ಕಾರಿ ವೈದ್ಯಾದಿಕಾರಿ ಸಂಘದ ಅಧ್ಯಕ್ಷ ಡಾ. ಹೆಚ್.ಎನ್. ರವೀಂದ್ರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಮುಖ್ಯ ಕಾರ್ಯದರ್ಶಿಯವರು ನೀಡಿರುವ ಆದೇಶವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯವರು ರದ್ದುಗೊಳಿಸಿದ್ದಾರೆ. ಅಲ್ಲದೆ ನಮಗೆ ಈ ಹಿಂದೆ ನೀಡಿದ್ದ ಬಹುತೇಕ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವುದರಿಂದ ಅನಿವಾರ್ಯವಾಗಿ ಬೀದಿಗಿಳಿಯಬೇಕಾಗಿದೆ ಎಂದು ರವೀಂದ್ರ ಹೇಳಿದರು.

ಮುಂದಿನ ಶೈಕ್ಷಣಿಕ ಉದ್ದೇಶ ಹಾಗೂ ಗ್ರಾಮೀಣ ಜನರ ಸೇವೆ ಸಲ್ಲಿಸುವ ದೃಷ್ಟಿಯಿಂದ ಸಂಪರ್ಕ ಸಾಧ್ಯವಿಲ್ಲದ ಗ್ರಾಮಗಳಲ್ಲೂ ಸೇವೆ ಮಾಡುತ್ತೇವೆ. ಗ್ರಾಮೀಣ ಜನರ ಸೇವೆ ಸಲ್ಲಿಸಿದರೂ ನಮ್ಮನ್ನು ಸರ್ಕಾರ ಗುರುತಿಸುತ್ತಿಲ್ಲ ಎಂದು ವೈದ್ಯರು ಆರೋಪಿಸಿದ್ದಾರೆ. ಜನರನ್ನು ಕಷ್ಟಕ್ಕೆ ದೂಡಬೇಕು ಎಂದು ಯಾರು ಬಯಸುವುದಿಲ್ಲ. ಆದರೆ, ನಮ್ಮ ಸೇವೆಗೆ ತಕ್ಕ ಬೆಲೆ ಸಿಗದಿದ್ದಾಗ, ಬೇಡಿಕೆಗಳಿಗೆ ಸರ್ಕಾರ ಕಿವಿಗೊಡದಿದ್ದಾಗ ಹೋರಾಟವೇ ಅಂತಿಮ ಮಾರ್ಗ ಎಂದು ರವೀಂದ್ರ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+