ಬಳ್ಳಾರಿ ಜಿಂದಾಲ್ ಮೇಲೆ ಆದಾಯ ತೆರಿಗೆ ದಾಳಿ

ಜಿಂದಾಲ್ನ ತೋರಣಗಲ್ಲು ಜೆಎಸ್ಡಬ್ಲ್ಯು ಘಟಕದ ಮಾನವಸಂಪನ್ಮೂಲ ವಿಭಾಗ, ಲೆಕ್ಕಚಾರ ವಿಭಾಗ ಸೇರಿ ಇನ್ನಿತರೆ ವಿಭಾಗಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ಬೆಳಗ್ಗೆಯಿಂದಲೇ ದಾಳಿ ನಡೆಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ಈ ದಾಳಿಗೆ ಪೂರಕವಾಗಿ ಸೌತ್ ವೆಸ್ಟ್ ಮೈನಿಂಗ್ ಕಂಪನಿ, ತಿಮ್ಮಪ್ಪನಗುಡ್ಡ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಾ ಜಿಂದಾಲ್ ಸಮೂಹಗಳ ಜೊತೆ ವ್ಯವಹಾರಿಕ ಸಂಪರ್ಕ ಹೊಂದಿರುವ ಎಂಎಂಎಲ್ ಹಾಗೂ ಇನ್ನಿತರೆ ಗಣಿ ಕಂಪನಿಗಳ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದೇ ರೀತಿಯಲ್ಲಿ ಜಿಂದಾಲ್ ಗ್ರೂಪ್ನ ಬೆಂಗಳೂರು ಮತ್ತು ಬಾಂಬೆ ಘಟಕಗಳ ಮೇಲೆ ಕೂಡ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ತನಿಖೆ ನಡೆಸಿದ್ದಾರೆ.
ಆದರೆ, ತನಿಖೆಯ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗುತ್ತಿಲ್ಲ. ಜಿಂದಾಲ್ನ ಸಿಬ್ಬಂದಿ, ಸಮೂಹದ ಎಲ್ಲಾ ಕಚೇರಿಗಳ ಮೇಲೆ ದಾಳಿ ನಡೆದಿದೆ. ಕೈಗಾರಿಕಾ ಉತ್ಪಾದನಾ ಘಟಕಗಳು ಎಂದಿನಂತೆ ನಡೆಯುತ್ತಿವೆ. ಕಂಪನಿಗಳ ಚಟುವಟಿಕೆಗಳು ಯಥಾರೀತಿಯಲ್ಲಿ ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರೇರಣ' ಟ್ರಸ್ಟ್ಗೆ ದೇಣಿಗೆ ನೀಡಿರುವ ಪಟ್ಟಿಯಲ್ಲಿ ಜೆಎಸ್ಡಬ್ಲು ಕಂಪನಿ ಕೂಡ ಸೇರಿದೆ. ಈ ವಿಚಾರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಂದಾಲ್ ಸಮೂಹ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ ಎಂದೇ ಹೇಳಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications