ಹೋಳಿ ದಿನ ಚುನಾವಣಾ ಕಣ ರಂಗೇರಿಸಿದ ಎಚ್ಡಿಕೆ

HD Kumaraswamy to contest Channapatna By poll
ಬೆಂಗಳೂರು, ಮಾ.20: ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೂಡಿದ್ದ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದೆ. ಜೆಡಿಎಸ್ ತೊರೆದು ಅಶ್ವಥ್ ಬಿಜೆಪಿ ಸೇರಿದ ಪರಿಣಾಮ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ಜೆಡಿಎಸ್ ನಿರ್ಧರಿಸಿದೆ. ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಕಣಕ್ಕಿಳಿಯುತ್ತಿದ್ದೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಅನಿವಾರ್ಯವಾಗಿದೆ. ಪ್ರಚಾರಕ್ಕೆ ಬರದಿದ್ದರೂ ಪರವಾಗಿಲ್ಲ ನಿಮ್ಮನ್ನು ಗೆಲ್ಲುವ ಭಾರ ನಮ್ಮದು ಎಂದು ಇಲ್ಲಿನ ಜನತೆ ಹೇಳುತ್ತಿದ್ದಾರೆ. ಅವರ ಅಭಿಮಾನಿಕ್ಕೆ ಕುಮಾರಸ್ವಾಮಿ ಮಣಿದಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಅಪರೇಷನ್ ಕಮಲ ಮೂಲಕ ರಾಜಕೀಯವನ್ನು ಹಾಳು ಮಾಡಿರುವ ಬಿಜೆಪಿಗೆ ತಕ್ಕಪಾಠ ಕಲಿಸಬೇಕಿದೆ. ತಾವು ಕ್ಷೇತ್ರದ ಜನತೆಯ ಮನವಿಯನ್ನು ದೇವೇಗೌಡರಿಗೆ ಸಲ್ಲಿಸಿ, ಒಪ್ಪಿಗೆ ಪಡೆಯುತ್ತೇನೆ. ಬಹುಶಃ ಬುಧವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಪಕ್ಷದ ಕಾರ್ಯಕರ್ತ ಸಭೆಯಲ್ಲಿ ಕುಮಾರಸ್ವಾಮಿ ಹೇಳಿದರು.

ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಹೊರ ಹಾಕಿದೆ. ಅದರೆ, ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಿಂದ ರಘುನಂದನ್ ರಾಮಣ್ಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಕುಮಾರಣ್ಣನ ವಿರುದ್ಧ ನಾನು ಸ್ಪರ್ಧಿಸಲಾರೆ. ಮಂತ್ರಿಗಿರಿನೂ ಬೇಡ ಏನೂ ಬೇಡ ಹೈಕಮಾಂಡ್ ಒತ್ತಡಕ್ಕೆ ಮಣಿಯಲಾರೆ ಎಂದು ಮಾಜಿ ಶಾಸಕ ಕಮ್ ನಟ ಸಿಪಿ ಯೋಗೀಶ್ವರ ಥಕ ಥೈ ಎಂದು ಕುಣಿಯುತ್ತಿದ್ದಾರೆ. ಹಾಗಾಗಿ ನಾಮಪತ್ರ ಸಲ್ಲಿಕೆಯಾಗುವ ತನಕ ಕುಮಾರಸ್ವಾಮಿ ಸ್ಪರ್ಧಿಗಳು ಯಾರು ಎಂಬುದನ್ನು ಸ್ಪಷ್ಟಪಡಿಸಲು ಖಂಡಿತ ಸಾಧ್ಯವಿಲ್ಲ.

ಇತ್ತ ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ, ಬಂಗಾರಪೇಟೆ, ಜಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಏಪ್ರಿಲ್ 9ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನ ಮಾತ್ರ ಬಾಕಿಯಿದೆ. ಕೊನೆ ಸಮಯದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ತೊಡಗಿದ್ದು, ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದೆ. ಮೇ 13 ರಂದು ಜನಪ್ರತಿನಿಧಿಗಳ ಭವಿಷ್ಯ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+