ಮಂಗಳಮುಖಿಯರ ಹಕ್ಕುಗಳ ಬಗ್ಗೆ ಕಾರ್ಯಾಗಾರ
ಬಳ್ಳಾರಿ,
ಮಾ. 23 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳಮುಖಿಯರ ಹಕ್ಕುಗಳ ಬಗ್ಗೆ ಕಾನೂನು ಸಾಕ್ಷರತಾ ಕಾರ್ಯಾಗಾರವನ್ನು ಮಾರ್ಚ್ 27ರ ಭಾನುವಾರ ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದೆ. id="toptextpromo">ಈ
ಕಾರ್ಯಾಗಾರದಲ್ಲಿ ಸಾಮಾಜಿಕ, ವೈದ್ಯಕೀಯ, ಭಾವನಾತ್ಮಕ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಗುವುದು. ಈ ಕಾರ್ಯಾಗಾರಕ್ಕೆ ಧಾರವಾಡ, ಕಾರವಾರ, ಬೆಳಗಾವಿ, ಬಾಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ ಮತ್ತು ಹಾವೇರಿ ಸೇರಿದಂತೆ ಸುಮಾರು 8 ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಲಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಮಂಗಳಮುಖಿಯರು,
ಸಾಮಾಜಿಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತರಾಗುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎನ್. ಕೆ. ಸುಧೀಂದ್ರರಾವ್, ಪ್ರಧಾನ ದಂಡಾಧಿಕಾರಿ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್‍ಯದರ್ಶಿ ಹೊಸಮನಿ ಸಿದ್ದಪ್ಪ ಎಚ್. ಅವರು ತಿಳಿಸಿದ್ದಾರೆ.











Click it and Unblock the Notifications