ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

By Mahesh
|
Google Oneindia Kannada News

Karnataka govt staff DA hike
ಬೆಂಗಳೂರು, ಏ.8:ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಸರ್ಕಾರ ಯುಗಾದಿ ನಂತರ ಸಿಹಿ ಸುದ್ದಿ ಹೊರಡಿಸಿದೆ. ಜನವರಿಯಿಂದ ಅನ್ವಯವಾಗುವಂತೆ ಶೇ.6.25 ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಿ ಕರ್ನಾಟಕ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಹಾಲಿ ಲಭ್ಯವಿರುವ ತುಟ್ಟಿ ಭತ್ಯೆ ದರವನ್ನು ಮೂಲ ವೇತನದ ಶೇ. 56.25 ರಿಂದ ಶೇ. 62.5 ಕ್ಕೆ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಜನವರಿ ಒಂದರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಈ ಆದೇಶದ ಮೇರೆಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ನಗದಾಗಿ ಮುಂದಿನ ಆದೇಶ ಹೊರಡಿಸುವವರೆಗೆ ಪಾವತಿ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ, ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ, ಸರ್ಕಾರ ದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಧೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆರನೇ ವೇತನ ಆಯೋಗ ರಚನೆಗೆ ಪಟ್ಟು ಹಿಡಿದಿರುವ ರಾಜ್ಯ ನೌಕರರಿಗೆ ಶೇ 6.25 ತುಟ್ಟಿ ಭತ್ಯೆ ಸರ್ಕಾರಿ ನೌಕರರನ್ನು ಸಮಾಧಾನಪಡಿಸಲು ತುಟ್ಟಿಭತ್ಯೆ ದರಗಳನ್ನು ಸರ್ಕಾರ ಹೆಚ್ಚಿಸಿದೆ. ಅದಲ್ಲದೆ, ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ದಿಢೀರ್ ಎಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವ ಬಿಜೆಪಿ ಸರ್ಕಾರದ ಆದೇಶಕ್ಕೆ ಎಷ್ಟರಮಟ್ಟಿಗೆ ಅನುಷ್ಠಾನಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

English summary
Karnataka government has announced hike in dearness allowance(DA) by 6.25 percent on Thursday(Apr.7). This DA hike will be effective from January 1, is provided to government staff and pensioners. Presently DA is paid at 56.25 percent of basic pay.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X