ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ ತಿಂಗಳಲ್ಲಿ ಸಂತ್ರಸ್ತರ ಕೈಗೆ ಆಸರೆ ಮನೆಗಳ ಕೀಲಿ ಕೈ

By Rajendra
|
Google Oneindia Kannada News

Karunakara Reddy
ಬಳ್ಳಾರಿ.ಏ. 9: ಕರ್ನಾಟಕ ರಾಜ್ಯದಲ್ಲಿಯ ಕುಡಿಯುವ ನೀರಿನ ಸಮಸ್ಯೆ ಕುರಿತು ಏಪ್ರಿಲ್ 13ರ ಬುಧವಾರ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಯಲಿದೆ ಎಂದು ಕಂದಾಯ ಸಚಿವ ಜಿ. ಕರುಣಾಕರರೆಡ್ಡಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕಂದಾಯ ಇಲಾಖೆ 13 ಕೋಟಿ ರುಪಾಯಿಗಳನ್ನು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು 100 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ.

1,800 ಸರ್ವೆಯರ್‌ಗಳ ನೇಮಕದ ಪೂರ್ವಭಾವಿ ಪ್ರಕ್ರಿಯೆ ನಡೆದಿದೆ. ಅರ್ಜಿಗಳನ್ನು ಆಹ್ವಾನಿಸಿ, ಸಿಇಟಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಂದಾಯ ಇಲಾಖೆಯಲ್ಲಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಯಲ್ಲಿ ಮೇ 15ರೊಳಗಾಗಿ 4,500ಆಸರೆ ಮನೆಗಳ ನಿರ್ಮಾಣಕಾರ್ಯ ಪೂರ್ಣಗೊಳ್ಳಲಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯಕೂಡ ಶೀಘ್ರದಲ್ಲೇ ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ದಾನಿಗಳ ಸಭೆಯನ್ನು ಕೂಡ ನಡೆಸಲಾಗಿತ್ತು, ದಾನಿಗಳು ತಮ್ಮ ಮಾತನ್ನು ಪೂರೈಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವಗ್ರಾಮಗಳಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ನವಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರವೇ ಹಸ್ತಾಂತರ ಮಾಡಲಾಗುತ್ತದೆ. ಫಲಾನುಭವಿಗಳು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಒಟ್ಟು 50 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 9 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲಾ ಮನೆಗಳ ಹಂಚಿಕೆ ಕಾರ್ಯಕೂಡ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.ಜಿಲ್ಲಾಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಸ್. ಮುತ್ತಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Revenue Minister G. Karunakara Reddy on Friday said that around 50,000 Aasare houses, which are being constructed for the 2009 flood victims, would be ready by May. In about nine villages, the construction of houses is yet to begin owing to unavailability of land, and in other places, work has begun,” he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X