ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ದೇವಾಲಯ ಕೆಡವಲು ಹೈಕೋರ್ಟ್ಆದೇಶ

By Rajendra
|
Google Oneindia Kannada News

Karnataka High Court
ಬೆಂಗಳೂರು, ಏ.9: ಅಗ್ರಹಾರ ದಾಸರಹಳ್ಳಿಯ ಡಾ.ರಾಜ್ ಕುಮಾರ್ ವಾರ್ಡ್‌ನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿರುವ ದೇವಾಲಯವನ್ನು ತೆರವುಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೇಹರ್ ಹಾಗೂ ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರನ್ನು ಒಳಗೊಂಡಿದ್ದ ವಿಭಾಗೀಯ ಪೀಠ ಅಕ್ರಮ ದೇವಾಲಯ ತೆರವಿಗೆ ಆದೇಶಿಸಿದೆ. ವಿಜಯಲಕ್ಷ್ಮಿ ಎಂಬುವರು ಸಲ್ಲಿಸಿದ್ದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯ ಈ ನಿರ್ಧಾರಕ್ಕೆ ಬಂದಿದೆ.

ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿರುವ ದೇವಾಲಯವನ್ನು ತೆರವುಗೊಳಿಸುವಂತೆ ವಿಜಯಲಕ್ಷ್ಮಿ ಅವರು ಹಲವಾರು ಬಾರಿ ಬಿಬಿಎಂಪಿಗೆ ದೂರು ನೀಡಿದರೂ ಪ್ರಯೋಜವಾಗಿರಲಿಲ್ಲ. ಕಡೆಗೆ ಅವರು ಬೇಸತ್ತು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಾರ್ವಜನಿಕ ಸ್ಥಳದಲ್ಲಿ ನಿರ್ಮಿಸಿರುವ ಗುರು ಶನೇಶ್ವರ ಮತ್ತು ಮುನೇಶ್ವರ ದೇವಾಲಯಗಳನ್ನು ತೆರೆವುಗೊಳಿಸಿ ಎರಡು ವಾರಗಳ ಅವಧಿಯಲ್ಲಿ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಕೋರ್ಟ್ ಆದೇಶಿಸಿದೆ.

English summary
The Karnataka High Court on Friday directed the Bruhat Bangalore Mahanagara Palike to demolish a temple built on public property at Agrahara Dasarahalli in Dr. Raj Kumar ward within a week. Guru Shaneshwara and Muneshwara temple, conceded that the temple was built on public land.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X