ನಂಜನಗೂಡು ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಾವು

Car Crash Nanjangud
ಮೈಸೂರು, ಏ. 12: ನಂಜನಗೂಡು ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜೆಎಸ್ಎಸ್ ಪಾಲಿಟೆಕ್ನಿಕ್ ನ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಊಟಿ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಅಕ್ಷಯ್ (20) ಮತ್ತು ಪ್ರವೀಣ್ (20) ಎಂದು ಗುರುತಿಸಲಾಗಿದ್ದು, ದರ್ಶನ್ ಮತ್ತು ಮಂಜುನಾಥ್ ಗಾಯಗೊಂಡವರು. ಪಟ್ಟಣದ ಹೊರ ವಲಯದಲ್ಲಿ ಅಕ್ಷಯ್ ಕಾರಿನ ನಿಯಂತ್ರಣ ಕಳೆದುಕೊಂಡಾಗ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ನಂಜನಗೂಡು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+