ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಚಾ ಮನುಷ್ಯರಾದ್ರೆ ಸಿಬಿಐ ಎದುರಿಸಿ:ರೇವಣ್ಣ

By Mahesh
|
Google Oneindia Kannada News

HD Revanna
ಹಾಸನ, ಏ.19: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ನೀಡಿದೆ. ಹತ್ತು ಹಲವು ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗಳು, ಲೋಕಾಯುಕ್ತ ವರದಿಯನ್ನು ದಿಕ್ಕರಿಸಿ, ಸಿಇಸಿ ವರದಿ ಕೈಲಿ ಹಿಡಿದು ರೆಡ್ಡಿಗಳ ಬೆನ್ನ ಹಿಂದೆ ನಿಂತಿರುವುದು ನಾಚಿಕೆಗೇಡು. ಬಿಜೆಪಿಯ ಮುಖಂಡರು ಸಾಚಾ ಮನುಷ್ಯರಾದರೆ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಅಕ್ರಮ ಗಣಿಗಾರಿಕೆ ನಡೆದಿರುವ ಕುರಿತು ಈ ಹಿಂದೆಯೇ ಲೋಕಾಯುಕ್ತ ಸಂತೋಷ್ ಹೆಗ್ಡೆ ವರದಿ ನೀಡಿದ್ದರೂ, ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇಡೀ ವರದಿಯನ್ನೇ ಕಸದ ಬುಟ್ಟಿಗೆ ಹಾಕಿದೆ ಎಂದು ರೇವಣ್ಣ ಆರೋಪಿಸಿದ್ದಾರೆ.

ಆದರೆ ಈಗ ಸುಪ್ರೀಂ ಕೋರ್ಟ್ ಲೋಕಾಯುಕ್ತರ ವರದಿ ಆಧಾರಿಸಿ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈಗ ಎಚ್ಚೆತ್ತಿರುವ ಸರ್ಕಾರದ ಕೆಲವು ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಇದರ ಸತ್ಯಾಸತ್ಯತೆ ಹೊರಬೀಳಬೇಕಾದರೆ ಸಮಗ್ರವಾಗಿ ತನಿಖೆ ನಡೆಸಲು ಸಿಬಿಐ ಸೂಕ್ತ ಎಂದು ರೇವಣ್ಣ ಹೇಳಿದ್ದಾರೆ.

ಎಲ್ಲಾ ಯಡಿಯೂರಪ್ಪ ಕೈಲಿದೆ: ಮುಖ್ಯಮಂತ್ರಿ ಯಡಿಯೂರಪ್ಪರ ಬಳಿಯೇ ಗಣಿ, ಅರಣ್ಯ, ಹಣಕಾಸು ಸೇರಿದಂತೆ ಹಲವು ಇಲಾಖೆಗಳಿವೆ. ಆದರೂ ಏಳು ಚೆಕ್‌ಪೋಸ್ಟ್‌ಗಳ ಮೂಲಕ ಅಕ್ರಮವಾಗಿ ಅದಿರು ಸಾಗಣೆಯಾಗುತ್ತಿದೆ. ಏ. 21ರ ಅದಿರು ಸಾಗಾಣಿಕೆ ಮುಂದುವರೆಯಲಿದೆ. ಮುಖ್ಯಮಂತ್ರಿಗಳ ಕೈವಾಡ ಇಲ್ಲ ಎನ್ನುವುದಾದರೆ ಸಿಬಿಐ ತನಿಖೆಗೆ ಯಾಕೆ ಒಳಪದಬಾರದು ಎಂದು ರೇವಣ್ಣ ಆಗ್ರಹಿಸಿದ್ದಾರೆ.

ಗಣಿ ಮಾಲೀಕರಿಂದ ಮುಖ್ಯಮಂತ್ರಿಗಳ ಕುಟುಂಬದ ಸದಸ್ಯರಿರುವ ಪ್ರೇರಣಾ ಟ್ರಸ್ಟ್‌ಗೆ 27 ಕೋಟಿ ರೂಪಾಯಿ ನೀಡಿರುವುದು ಈಗಾಗಲೇ ಬೆಳಕಿಗೆ ಬಂದಿದೆ ಎಂದು ಆರೋಪಿಸಿದ ರೇವಣ್ಣ, ರಾಜ್ಯದ ಅದಿರು ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

English summary
JDS leader HD Revanna demanded CBI probe on illegal mining in Karnataka. Scam hit Yeddyurappa government is facing SC notice but, Yeddyurappa is hiding the truth and suppressing the Lokayukta report on Reddy Brothers. If they are clean let them face CBI
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X