ಮೋದಿಗೆ ಹಿನ್ನಡೆ, ಕಾಂಗ್ರೆಸ್ ಮೇಲು ಕೈ
ಗಾಂಧಿನಗರ,
ಏ. 21: ಹೊಸದಾಗಿ ಅಸ್ತಿತ್ವಕ್ಕೆ ಬಂದ ಗಾಂಧಿನಗರ ನಗರಸಭೆಗಾಗಿ (GMC) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಏಪ್ರಿಲ್ 19ರಂದು 33 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಬಾಚಿಕೊಳ್ಳುವ ಮೂಲಕ ಆಡಳಿತಾರೂಢ ಬಿಜೆಪಿಗೆ ಅದರಲ್ಲೂ ರಾಜ್ಯದ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಸೋಲು ಉಣಿಸಿದೆ. id="toptextpromo">ಗಮನಾರ್ಹವೆಂದರೆ
GMC, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ ಪ್ರತಿನಿಧಿಸುವ ಗಾಂಧಿನಗರ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ನೇರ ಸ್ಪರ್ಧೆ ಕಂಡ ನಗರಸಭೆಯ ಚೊಚ್ಚಲ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನಗಳು ದಕ್ಕಿವೆ. id='are-slot-1' class='oiad oi-axt oiadv'> id='top-searched-articles'>ಗುಜರಾತ್
ರಾಜ್ಯದ ರಾಜಧಾನಿಯಲ್ಲಿ ಕಾಂಗ್ರೆಸ್ ಕೀರ್ತಿ ಪತಾಕೆ ಹಾರಿಸಿದೆ. ಗಾಂಧಿನಗರದ ಜನ ಮೋದಿ ಆಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಇದು 2012ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ನರಹರಿ ಅಮೀನ್ ಪ್ರತಿಕ್ರಿಯಿಸಿದ್ದಾರೆ.











Click it and Unblock the Notifications