ಪಿಯುಸಿಯಲ್ಲಿ ಅನುತ್ತೀರ್ಣ ತ.ನಾಡು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು,
ಮೇ.1: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ 18 ವರ್ಷ ತಮಿಳುನಾಡಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಡಿವಾಳ ಸಮೀಪದ ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ. ಚಾಮುಂಡೇಶ್ವರಿ ಎಂಬುವವರ ಮಗಳು ಮೋನಿಕಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. id="toptextpromo">ಮೋನಿಕಾ
ತಮಿಳುನಾಡಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ದ್ವಿತೀಯ ಪಿಯುಸಿಯಲ್ಲಿ ಆಕೆ ಅನುತ್ತೀರ್ಣರಾಗಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ಘಟನೆ ಗುರುವಾರ(ಏ.28) ಸಂಜೆ ಆರು ಗಂಟೆ ಸಮಯದಲ್ಲಿ ನಡೆದಿದೆ. ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಗೊಂಡಿದ್ದ ಆಕೆ ಮನೆಯಲ್ಲಿ ಸಾವಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications