ಯಡಿಯೂರಪ್ಪ ವಿರುದ್ಧ ಪಕ್ಷಾತೀತ ಹೋರಾಟ:ಗೌಡ ಗುಡುಗು
ಬೆಂಗಳೂರು,
ಮೇ 3: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಹೋರಾಡಲು ಮಾಜಿ ಪ್ರಧಾನಿ ದೇವೇಗೌಡ ಮತ್ತೊಮ್ಮೆ ಟೊಂಕಕಟ್ಟಿ ನಿಂತಿದ್ದಾರೆ. ಈ ಸಂಬಂಧ ನಗರದ ಖಾಸಗಿ ಹೋಟೆಲ್ ನಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ಕಲಾವಿದರ ಸಭೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಬಾರಿ ರಾಜ್ಯಾದ್ಯಂತ ಪಕ್ಷಾತೀತವಾಗಿ ಹೋರಾಡುವುದಾಗಿ ದೇವೇಗೌಡರು ಈ ಸಂದರ್ಭದಲ್ಲಿ ಹೇಳಿದ್ದಾರೆ. id="toptextpromo">ಈ
ಜನಾಂದೋಲನ ಪೂರ್ವಭಾವಿ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ, ಮಾಜಿ ಸಚಿವರಾದ ಬೆಂಕಿ ಮಹಾದೇವು, ಬಿ.ಟಿ. ಲಲಿತಾ ನಾಯಕ್, ಶಿವಣ್ಣ ಮುಂತಾದ ಹಿರಿಯರು ಪಾಲ್ಗೊಂಡಿದ್ದಾರೆ. ಪ್ರಗತಿಪರರು, ದಲಿತ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ. ರಾಜ್ಯದ ಮೂಲೆ, ಮೂಲೆಗಳಲ್ಲಿ ನಡೆಯಲಿರುವ ಈ ಜನಾಂದೋಲನ ಹೇಗಿರಬೇಕು, ಆಂದೋಲನವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. id='are-slot-1' class='oiad oi-axt oiadv'> id='top-searched-articles'>ಯಡಿಯೂರಪ್ಪ
ಅವರನ್ನು ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ ಎಂದು ಗೌಡರು ಹೇಳಿದ್ದಾರೆ. ಗಮನಾರ್ಹವೆಂದರೆ ಇದುವರೆಗೆ ಜಾತ್ಯತೀತ ಹೋರಾಟಕ್ಕೆ ಬದ್ಧರಾಗಿದ್ದ ಗೌಡರು ಈ ಬಾರಿ ಪಕ್ಷಾತೀತ ಹೋರಾಟಕ್ಕೆ ಅಣಿಯಾಗಿದ್ದು, ಎಲ್ಲ ಪಕ್ಷಗಳೂ ಇದರಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.











Click it and Unblock the Notifications