ಮೈಸೂರಿನ ರಾಜ್ಯ ಹೆದ್ದಾರಿಯಲ್ಲಿ ಮಾವಿನಸಂತೆ...

ಈ ಮಾವಿನಹಣ್ಣಿನ ಸಂತೆಯನ್ನು ನೋಡಬೇಕಾದರೆ ಮೈಸೂರಿನಿಂದ ಹುಣಸೂರು ಕಡೆಗೆ ತೆರಳುವ ರಾಜ್ಯ ಹೆದ್ದಾರಿ 88ರಲ್ಲಿ ಸುಮಾರು 20 ಕಿ.ಮೀ ದೂರದಲ್ಲಿರುವ ಚಿಕ್ಕಕಡ್ನಳ್ಳಿಗೆ ಹೋಗಬೇಕು. ಈ ಹಳ್ಳಿಯೇ ಮಾವಿನಹಣ್ಣು ಸಂತೆಯ ಕೇಂದ್ರಬಿಂದು. ಸಾಮಾನ್ಯವಾಗಿ ಮೈಸೂರಿನಿಂದ ಹುಣಸೂರು ಮಾರ್ಗವಾಗಿ ಸಾಗುವಾಗ ಚಿಕ್ಕಕಡ್ನಳ್ಳಿಯಲ್ಲಿ ಕಿಲೋಮೀಟರ್‌ಗಟ್ಟಲೆ ತಳ್ಳುವ ಗಾಡಿಗಳಲ್ಲಿ ಜೋಡಿಸಿಟ್ಟ ವಿವಿಧ ಬಗೆಯ ಮಾವಿನ ಹಣ್ಣುಗಳು ಪ್ರಯಾಣಿಕರ ಗಮನಸೆಳೆದಿರುತ್ತವೆ.
ಹಾಗೆನೋಡಿದರೆ ಚಿಕ್ಕಕಡ್ನಳ್ಳಿಯಲ್ಲಿ ನಡೆಯುತ್ತಿಯವ ಮಾವಿನಹಣ್ಣಿನ ಸಂತೆ ಇಂದು ನಿನ್ನೆಯದಲ್ಲ. ಇಲ್ಲಿನ ಸಂತೆಗೆ ಹಲವು ದಶಕಗಳ ಇತಿಹಾಸವಿದೆ. ಹಳ್ಳಿಯ ಸುತ್ತಮುತ್ತಲಿನ ನಾಗವಾಲ, ಕಾಮನಕೊಪ್ಪಲು, ಸೀಗಳ್ಳಿ, ಮಾರಗೌಡನಹಳ್ಳಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ಹೇರಳವಾಗಿ ಮಾವಿನಹಣ್ಣನ್ನು ಬೆಳೆಯುತ್ತಾರೆ. ಮೊದಲೆಲ್ಲಾ ಕೆಲವೇ ಜಾತಿಯ ಹಣ್ಣನ್ನು ಬೆಳೆಯುತ್ತಿದ್ದರಾದರೂ ಇತ್ತೀಚೆಗೆ ಸ್ಥಳೀಯ ಬೆಳೆಗಾರರು ಮಾವಿನ ಕೃಷಿಯನ್ನು ಅಭಿವೃದ್ಧಿಗೊಳಿಸಿದ್ದು ಅಲ್ಫೊನ್ಸೊ, ಬಾದಾಮಿ, ರಾಜಗಿರಿ, ಮಲ್ಲಿಕಾ, ರಸಪುರಿ, ನೀಲಂ ಮತ್ತು ತೋತಾಪುರಿ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ.
ತೋಟದಿಂದ ತಾಜಾ ಹಣ್ಣುಗಳು : ಹಲವು ವರ್ಷಗಳ ಹಿಂದೆ ತಾವು ಬೆಳೆದ ಹಣ್ಣನ್ನು ದೂರದ ಮೈಸೂರಿಗೆ ಒಯ್ದು ಮಾರಾಟ ಮಾಡಲು ಸಾಧ್ಯವಾಗದ ಕೆಲವು ಬೆಳೆಗಾರರು ರಸ್ತೆಬದಿಯಲ್ಲಿರಿಸಿ ಮಾರಾಟ ಮಾಡಲು ಮುಂದಾದರು. ಮೈಸೂರಿನಿಂದ ಕೊಡಗು, ಹಾಸನ, ಮಂಗಳೂರಿನತ್ತ ತೆರಳುವ ಕೆಲವು ಪ್ರವಾಸಿಗರು ತಮ್ಮ ವಾಹನವನ್ನು ನಿಲ್ಲಿಸಿ ಇಲ್ಲಿಂದ ಹಣ್ಣನ್ನು ಖರೀದಿಸುತ್ತಿದ್ದರು. ತೋಟದಿಂದ ನೇರವಾಗಿ ತಾಜಾ ಹಣ್ಣು ಗ್ರಾಹಕರ ಕೈಗೆ ಸೇರುತ್ತಿದ್ದುದರಿಂದ ದೂರದಿಂದ ಬರುತ್ತಿದ್ದ ಪ್ರವಾಸಿಗರು ಹಣ್ಣನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು. ಯಾವಾಗ ಪ್ರವಾಸಿಗರು ಹಣ್ಣನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಲು ಪ್ರಾರಂಭಿಸಿದರೋ ಸುತ್ತಮುತ್ತಲಿನ ಇತರೆ ಯುವಕರು ಮಾವಿನಹಣ್ಣಿನ ಮಾರಾಟದತ್ತ ಒಲವು ತೋರಿಸತೊಡಗಿದರಲ್ಲದೆ, ಆ ಮೂಲಕ ಉದ್ಯೋಗದ ಹಾದಿ ಕಂಡುಕೊಂಡರು. ಇವತ್ತಿಗೂ ಸುತ್ತಮುತ್ತಲ ಹಳ್ಳಿಯ ಯುವಕರು ಮಾವಿನಹಣ್ಣಿನ ಮಾರಾಟವನ್ನು ಪಾರ್ಟ್ ಟೈಂ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.
ದಿನಕಳೆದಂತೆ ಚಿಕ್ಕಕಡ್ನಳ್ಳಿಯಲ್ಲಿ ಮಾವಿನಹಣ್ಣಿನ ವ್ಯಾಪಾರ ಚೆನ್ನಾಗಿ ನಡೆಯುತ್ತದೆ ಎಂಬುವುದನ್ನು ಅರಿತ ಕೆಲವರು ತಮ್ಮ ತೋಟದಲ್ಲಿ ಬೆಳೆದ ಹಣ್ಣನ್ನು ತಂದು ಗಾಡಿಯಲ್ಲಿರಿಸಿ ಮಾರಾಟ ಮಾಡಿದರೆ, ಇನ್ನು ಕೆಲವರು ಮೈಸೂರಿನ ಮಾರುಕಟ್ಟೆಯಿಂದ ಖರೀದಿಸಿ ತಂದು ಮಾರಾಟ ಮಾಡಲು ಮುಂದಾದರು. ಈ ಹಳ್ಳಿಯ ವ್ಯಾಪ್ತಿಯಲ್ಲಿ ಹಲವು ಏಕರೆ ಪ್ರದೇಶದಲ್ಲಿ ಮಾವಿನಹಣ್ಣನ್ನು ಬೆಳೆಯುವ ಬೆಳೆಗಾರರಿದ್ದಾರೆ. ಆದರೆ ಅವರ್‍ಯಾರು ಇಲ್ಲಿನ ಮಾವಿನಸಂತೆಗೆ ಹಣ್ಣನ್ನು ಕಳುಹಿಸುತ್ತಿಲ್ಲ ಎಂಬುವುದು ಕಟುಸತ್ಯ. ಹೆಚ್ಚಿನ ಬೆಳೆಗಾರರು ತಮ್ಮ ತೋಟದ ಫಸಲನ್ನು ಮೈಸೂರಿನ ಮಾರುಕಟ್ಟೆಯ ವ್ಯಾಪಾರಿಗಳಿಗೆ ನೀಡಿ ಹಣ ಪಡೆಯುತ್ತಾರೆ. ಹಾಗಾಗಿ ಚಿಕ್ಕಕಡ್ನಳ್ಳಿಯಲ್ಲಿ ದೊರೆಯುವ ಮಾವಿನಹಣ್ಣನ್ನು ಮೈಸೂರಿನ ಮಾರುಕಟ್ಟೆಯಿಂದ ಖರೀದಿಸಿ ತಂದು ಮಾರಾಟ ಮಾಡುತ್ತಿರುವುದಾಗಿ ಕಳೆದ ಒಂಬತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ಮಹದೇವ್ ಹೇಳುತ್ತಾರೆ.
ಫೆಬ್ರವರಿಯಿಂದ ಆರಂಭವಾಗುವ ಮಾವಿನಸಂತೆ ಆಗಸ್ಟ್‌ವರೆಗೆ ನಡೆಯುತ್ತದೆ. ಮಾವಿನಹಣ್ಣಿನ ಕಾಲ ಮುಗಿದ ಬಳಿಕ ಮಾರಾಟಗಾರರು ಮೈಸೂರಿನತ್ತ ತೆರಳಿ ಗಾರೆ ಕೆಲಸ ಸೇರಿದಂತೆ ಯಾವುದಾದರು ಕೆಲಸ ಮಾಡಿ ಹೊಟ್ಟೆಪಾಡು ನೋಡಿಕೊಳ್ಳುತ್ತಾರೆ. ಈ ಮಾವಿನಹಣ್ಣಿನ ಸಂತೆಯನ್ನು ಹತ್ತಿರದಿಂದ ನೋಡಿದ ಸಿನಿಮಾ ನಿರ್ಮಾಪಕರು ಚಿತ್ರೀಕರಣವನ್ನು ಕೂಡ ಮಾಡಿದ್ದಾರೆ. ಹಳ್ಳಿಯಿಂದ ಮಾವಿನಹಣ್ಣನ್ನು ಖರೀದಿಸಿ ಪಟ್ಟಣದಲ್ಲಿ ಮಾರಾಟ ಮಾಡುವುದು ಸಾಮಾನ್ಯ. ಆದರೆ ಪಟ್ಟಣದಿಂದ ಖರೀದಿಸಿ ಅದನ್ನು ಹಳ್ಳಿಯಲ್ಲಿ ಮಾರಾಟ ಮಾಡಬಹುದು ಎನ್ನುವುದಾದರೆ ಅದು ಚಿಕ್ಕಕಡ್ನಳ್ಳಿಯ ಮಾವಿನಸಂತೆಯಲ್ಲಿ ಮಾತ್ರ ಸಾಧ್ಯ. ಹಾಗಾದರೆ ಮಾವಿನ ಹಣ್ಣಿನ ಮಾರಾಟ ಭರಾಟೆ ಹೇಗಿರಬಹುದು ನೀವೇ ಊಹಿಸಿ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications