ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ರಾಜ್ಯಪಾಲ ಶಿಫಾರಸು

ಈ ಹಿನ್ನೆಲೆಯಲ್ಲಿ ತಮ್ಮ ಸ್ವಗೃಹದಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲರು ಶಿಫಾರಸು ಮಾಡಿರುವುದು ಸಂವಿಧಾನಕ್ಕೆ ವಿರೋಧವಾಗಿದೆ. ಸರಕಾರಕ್ಕೆ ಬಹುಮತವಿದ್ದರೂ ವಿಧಾನಸಭೆಯನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಿರುವುದರ ಹಿಂದೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಹುನ್ನಾರ ಎದ್ದು ಕಾಣುತ್ತಿದೆ. ಈ ಶಿಫಾರಸನ್ನು ವಿರೋಧಿಸಿ ಮತ್ತು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಷ್ಟ್ರಪತಿಗೆ, ಪ್ರಧಾನಿಗೆ ಮತ್ತು ಗೃಹ ಸಚಿವಾಲಯಕ್ಕೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಕರ್ನಾಟಕ ಪ್ರೀಮಿಯರ್ ಲೀಗ್ : ಯಡ್ಡಿ vs ರಾಜ್ಯಪಾಲ
ರಾಜ್ಯಪಾಲರ ಪತ್ರ ತಮಗೆ ತಲುಪಿದ್ದು, ಅದರಲ್ಲಿ ಬಿಜೆಪಿ ಸರಕಾರ ಕುದುರೆ ವ್ಯಾಪಾರದಲ್ಲಿ ನಿರತವಾಗಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ಮಾತು. ಪ್ರತಿಪಕ್ಷಗಳು ಸರಕಾರವನ್ನು ಉರುಳಿಸಲು ಮೇಲಿಂದ ಮೇಲೆ ಹುನ್ನಾರ ನಡೆಸುತ್ತಲೇ ಇದ್ದಾರೆ. ರಾಜ್ಯಪಾಲರು ಹೇಳಿದಂತೆ ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವಂತೆ ನಾವು ನಡೆದುಕೊಂಡಿಲ್ಲ. ಮುನಿಸಿಕೊಂಡಿದ್ದ 11 ಶಾಸಕರು ಕೂಡ ತಮ್ಮೊಂದಿಗಿದ್ದಾರೆ ಎಂದು ಅವರು ನುಡಿದರು.
ನಮ್ಮ ಬಳಿ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯೆಯಿದೆ. ಯಾವುದೇ ಕಾರಣಕ್ಕೂ ಈ ಶಿಫಾರಸಿಗೆ ರಾಷ್ಟ್ರಪತಿ ಮತ್ತು ಕೇಂದ್ರ ಮಣಿಯಬಾರದು. ಒಂದು ವೇಳೆ ಕೇಂದ್ರ ಮಣಿದದ್ದೇ ಆದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಯಡಿಯೂರಪ್ಪ ಕೆಂಡಕಾರಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲು ಸೋಮವಾರ, ಮೇ 16ರಂದು ಶಾಸಕಾಂಗ ಸಭೆ ಕರೆಯಲಾಗಿದೆ. ಹತ್ತು ದಿನಗಳ ವಿಧಾನಮಂಡಲದ ಅಧಿವೇಶನ ನಾಳೆಯಿಂದಲೇ ಆರಂಭವಾಗುತ್ತಿದೆ. ಕೇಂದ್ರದಲ್ಲಿ ಕೂಡ ಯುಪಿಎ ಸರಕಾರ ಸೋಮವಾರ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲು ತುರ್ತು ಸಂಪುಟ ಸಭೆಯನ್ನು ಕರೆದಿದೆ.
ಅನರ್ಹಗೊಂಡಿದ್ದ ಶಾಸಕರನ್ನು ಅರ್ಹಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಎರಡು ದಿನಗಳಲ್ಲಿಯೇ ಈ ಕ್ರಮ ತೆಗೆದುಕೊಂಡಿದ್ದು ಕರ್ನಾಟಕ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲವನ್ನೆಬ್ಬಿಸಿದೆ. ನವದೆಹಲಿಯಲ್ಲಿ ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಭಾರದ್ವಾಜ್ ಶನಿವಾರ ಪ್ರಧಾನಿಯನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದರು. ಮುಂದೆ ಏನು ಮಾಡಬೇಕೆಂಬುದನ್ನು ಬೆಂಗಳೂರಿಗೆ ಮರಳಿದ ನಂತರವೇ ಬಹಿರಂಗಪಡಿಸುವುದಾಗಿ ಹೇಳಿದ್ದರು. ಬೆಂಗಳೂರಿಗೆ ಮರಳುತ್ತಿದ್ದಂತೆಯೇ ವಿಧಾನಸಭೆಯನ್ನು ಅಮಾನತಿನಲ್ಲಿಡಲು ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಪ್ರತಿಕ್ರಿಯೆ : ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಪಾಲರು ಸಂವಿಧಾನಕ್ಕೆ ಬದ್ಧರಾಗಿಯೇ ಈ ಕ್ರಮವನ್ನು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವೇ ವಿಧಾನಸಭೆ ವಿಸರ್ಜಿಸಲು ಮನವಿ ಮಾಡಿತ್ತು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಲ್ಲದೆ, ಅನರ್ಹಗೊಂಡಿದ್ದ ಶಾಸಕರನ್ನು ಅರ್ಹಗೊಳಿಸಿ ಸುಪ್ರೀಂ ಕೋರ್ಟೇ ತೀರ್ಪು ನೀಡಿದೆ. ಕಳೆದ ಅಕ್ಟೋಬರಲ್ಲಿ ಇದೇ ಶಾಸಕರು ತಿರುಗಿಬಿದ್ದಾಗ ಶಾಸಕರನ್ನು ಅನರ್ಹಗೊಳಿಸದಿದ್ದರೆ ಮುಖ್ಯಮಂತ್ರಿ ಇಂದು ಮಾಜಿಯಾಗಿರುತ್ತಿದ್ದರು ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಸಹಮತ : ಸಂವಿಧಾನಾತ್ಮಕವಾಗಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಿದ್ದರೆ ಜೆಡಿಎಸ್ ಪಕ್ಷ ಇದನ್ನು ಸ್ವಾಗತಿಸುತ್ತದೆ. ಆದರೆ, ಯಾವ್ಯಾವ ವಿಷಯಗಳ ಆಧಾರದ ಮೇಲೆ ಸಂವಿಧಾನವನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಲಾಗಿದೆ ಎಂದು ಸ್ಪಷ್ಟವಾಗಿ ತಿಳಿದಿಲ್ಲ. ಸುಪ್ರೀಂ ಕೋರ್ಟಿನ ತೀರ್ಪು ಬಂದ ನಂತರ ಬಿಜೆಪಿ ಸರಕಾರ ಕುದುರೆ ವ್ಯಾಪಾರದಲ್ಲಿ ನಿರತವಾಗಿದೆ. ಇದು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದು ದಂಗೆಯೆದ್ದಿದ್ದ ಶಾಸಕರು ಇಂದು ಯಡಿಯೂರಪ್ಪ ಸ್ವಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications