ನಟ ರಜನಿಕಾಂತ್ ತೀವ್ರ ನಿಗಾ ಘಟಕಕ್ಕೆ ದಾಖಲು

ಸಕೋಶದಲ್ಲಿ ಹೆಚ್ಚುವರಿ ನೀರು ಶೇಖರಣೆಯಾಗಿ ರಜನಿಕಾಂತ್ ಅವರ ಉಸಿರಾಟಕ್ಕೆ ತೊಂದರೆಯಾಗಿತ್ತು. ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಇತ್ತೀಚೆಗೆ ತೆಗೆದುಹಾಕಲಾಗಿತ್ತು. ಆದರೆ ಅವರಿಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.
ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾಯಿಟ್ಟಿದೆ. ಎಲ್ಲ ಚಿಕಿತ್ಸೆಗೂ ಅವರು ಸ್ಪಂದಿಸುತ್ತಿದ್ದಾರೆ. ಯಾವುದೇ ಆತಂಕ ಪಡುವ ಆಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ನಿಮೋನಿಯಾ, ಕಿಡ್ನಿ ಮತ್ತು ಲಿವರ್ ಸಮಸ್ಯೆ ಸಹ ಅವರನ್ನು ಇತ್ತೀಚೆಗೆ ತೀವ್ರವಾಗಿ ಬಾಧಿಸುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ಶುಶ್ರೂಶೆ ಪಡೆಯುತ್ತಿದ್ದಾರೆ.












Click it and Unblock the Notifications