ರಾಜ್ಯಪಾಲರನ್ನು ವಾಪಸ್ ಕರೆಸುವ ಪ್ರಶ್ನೆಯೇ ಇಲ್ಲ : ಪಿಸಿ

P Chidambaram
ನವದೆಹಲಿ, ಮೇ. 23 : ರಾಜ್ಯಪಾಲ ಎಚ್ಆರ್ ಭಾರದ್ವಾಜ್ ಅವರನ್ನು ಕರ್ನಾಟಕದಿಂದ ವಾಪಾಸು ಕರೆಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ತಮ್ಮ ಕರ್ತವ್ಯವನ್ನು ಅವರು ನಿಷ್ಠೆಯಿಂದ ಮಾಡಿದ್ದಾರೆ ಎಂದು ಗೃಹ ಸಚಿವ ಪಿ ಚಿದಂಬರಂ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.

ಕೇಂದ್ರ ರಾಷ್ಟ್ರಪತಿ ಆಳ್ವಿಕೆ ಹೇರುವುದನ್ನು ತಳ್ಳಿಹಾಕಿದ್ದರೂ, ರಾಜ್ಯಪಾಲರನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಯಾಗಿ, ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳುವ ಪ್ರಮೇಯವನ್ನು ತಳ್ಳಿಹಾಕಿದರು.

ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಬಲವಾದ ಕಾರಣಗಳು ಕಂಡುಬಂದಿಲ್ಲವಾದ್ದರಿಂದ ರಾಜ್ಯಪಾಲರ ವರದಿಯನ್ನು ಸ್ವೀಕರಿಸಲಾಗಿಲ್ಲ ಎಂದು ಚಿದಂಬರಂ ಅವರು ಒತ್ತಿ ಹೇಳಿದರು.

ರಾಜ್ಯದಲ್ಲಿ ರಾಜ್ಯಭಾರ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಲವು ಸಲಹೆ ಸೂಚನೆಗಳನ್ನು ಮಂಗಳವಾರ ರವಾನಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು.

ಸರಕಾರವನ್ನು ಸರಿಯಾಗಿ ಕೆಲಸ ಮಾಡಬೇಕು, ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಯಡಿಯೂರಪ್ಪ ಅಂಡ್ ಕಂಪನಿಗೆ ಎಚ್ಚರಿಕೆಯನ್ನು ಕೂಡ ಇದೇ ಸಂದರ್ಭದಲ್ಲಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+