ಆಪರೇಶನ್ ಕಮಲಕ್ಕೆ ಬೈ ; ಸಂಪುಟ ವಿಸ್ತರಣೆ ಅಧಿವೇಶನದ ಬಳಿಕ

ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿ, ವಿಧಾನಮಂಡಲದ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಕಸರತ್ತು ನಡೆಸುವುದಾಗಿ ಅವರು ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ರಾಷ್ಟ್ರಪತಿ ಆಳ್ವಿಕೆ ಎಂಬ ತೂಗುಕತ್ತಿ ತಮ್ಮ ನೆತ್ತಿ ಮೇಲೆ ತೂಗುತ್ತಿದ್ದಾಗ ತಮ್ಮ ಬೆಂಬಲಕ್ಕೆ ನಿಂತ ಬಿಜೆಪಿ ವರಿಷ್ಠರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
ಎಲ್.ಕೆ. ಆಡ್ವಾಣಿ, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ, ಮಾತುಕತೆ, ಹೂ ಗುಚ್ಛಗಳನ್ನು ಬಿಎಸ್ ವೈ ವಿನಿಮಯ ಮಾಡಿಕೊಂಡರು.
ಬಿಜೆಪಿ ರಾಜ್ಯಾಧ್ಯಕ್ಷ ಕೆ. ಎಸ್. ಈಶ್ವರಪ್ಪ, ಸಂಸದ ಡಿ.ವಿ. ಸದಾನಂದ ಗೌಡ, ಕರ್ನಾಟಕ ಸರಕಾರದ ದೆಹಲಿ ಪ್ರತಿನಿಧಿ ವಿ. ಧನಂಜಯ್ ಕುಮಾರ್ ಅವರು ಈ ಸಂದರ್ಭದಲ್ಲಿ ಯಡಿಯೂರಪ್ಪ ಜತೆಗಿದ್ದರು.











Click it and Unblock the Notifications