ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳೆವು : ಕುಮಾರಸ್ವಾಮಿ

By Srinath
|
Google Oneindia Kannada News

Kumarswamy
ಬೆಂಗಳೂರು, ಮೇ 31 : ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸ್ಪೀಕರ್ ಹಾಗೂ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಮಾಡಿ ವಿಧಾನಮಂಡಲ ಅಧಿವೇಶನ ಬಹಿಷ್ಕರಿಸಲು ಜೆಡಿಎಸ್‌ ನಿರ್ಧರಿಸಿದೆ. ಸೋಮವಾರ ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಮಂಡಲ ಅಧಿವೇಶನ ಬಹಿಷ್ಕರಿಸುವ ತೀರ್ಮಾನಕ್ಕೆ ಬರಲಾಗಿದೆ.

ಸಭೆಯ ನಂತರ ವಿವರ ನೀಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು, ವಿಧಾನಮಂಡಲದ ಎರಡು ಸದನಗಳಲ್ಲಿ ಜೆಡಿಎಸ್‌ ಭಾಗವಹಿಸುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಸುಪ್ರೀಂ ಕೋರ್ಟ್, ಸ್ಪೀಕರ್ ವಿರುದ್ಧ ತೀರ್ಪು ನೀಡಿರುವುದು ದೇಶದಲ್ಲಿಯೇ ಇದೇ ಪ್ರಥಮವಾಗಿದೆ. ಮುಖ್ಯಮಂತ್ರಿ ಅವರು ಸ್ಪೀಕರ್ ಅವರನ್ನು ಯಾವ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದಾರೆ ಎಂಬುದು ತೀರ್ಪಿನಲ್ಲಿ ಹೇಳಲಾಗಿದೆ. ಆದ್ದರಿಂದ ಇಂತಹ ಸ್ಪೀಕರ್ ನಡೆಸುವ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

ಅಧಿವೇಶನ ವಿವರ: ಜೂನ್ 2ರಿಂದ 15ರವರೆಗೆ ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದ್ದಾರೆ.

2011-12ನೇ ಆರ್ಥಿಕ ವರ್ಷದ ಪೂರ್ಣ ಬಜೆಟ್‌ಗೆ ಒಪ್ಪಿಗೆ ಪಡೆಯುವುದು ಈ ಅಧಿವೇಶನದ ಪ್ರಮುಖ ಉದ್ದೇಶ. ಜೂ. 2ರಿಂದ ಹತ್ತು ಕೆಲಸದ ದಿನಗಳ ಕಾಲ ಅಧಿವೇಶನ ನಡೆಸಲು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಅದರಂತೆ ಜೂ.15ರವರೆಗೂ ಅಧಿವೇಶನ ನಡೆಯಲಿದೆ ಎಂದರು.

ಸಮಯಾವಕಾಶದ ಕೊರತೆ ಹಿನ್ನೆಲೆಯಲ್ಲಿ ಮೊದಲ ಎರಡು ದಿನಗಳ ಕಾಲ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ. ನಂತರದ ದಿನಗಳಲ್ಲಿ ಪ್ರಶ್ನೋತ್ತರ ನಡೆಯುತ್ತದೆ. ಈಗಾಗಲೇ ಸದಸ್ಯರು 350 ಪ್ರಶ್ನೆಗಳನ್ನು ನೀಡಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಿದರು.

English summary
Opposition JDS in Karnataka has decided to boycott the state Legislature Session beginning June 2, demanding resignation of Assembly speaker K G Bopaiah and Chief Minister B S Yeddyurappa in view of the Supreme Court strictures against them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X