ಕೆಪಿಎಸ್ ಸಿ ಹುದ್ದೆಗಳು: ಜೂನ್ 5 ಮತ್ತು 19ರಂದು ಪರೀಕ್ಷೆ

ಇದೇ ರೀತಿ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಯನ್ನು ಜೂನ್ 19ರಂದು ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಸುಮಾರು 2,60,951 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದು, ಪರೀಕ್ಷೆಯನ್ನು ಒಟ್ಟು 629 ಉಪ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಎರಡು ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ಎರಡೂ ಪರೀಕ್ಷೆಗಳಲ್ಲಿ ದುರ್ನಡತೆ ಹಾಗೂ ಅವ್ಯವಹಾರಗಳು ನಡೆಯದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಥಮ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ನಿರ್ಧರಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನೂ ಸಹ ಸ್ಥಳೀಯವಾಗಿ ಕಲ್ಪಿಸಲಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ಸೈಟ್ನಿಂದ http://kpsc.kar.nic.in ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು. ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳದ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಅನುಮತಿಸಲಾಗುವುದಿಲ್ಲ. ದ್ವಿತೀಯ/ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾರದರ್ಶಕತೆಯಡಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications