ಪಿಲಿಕುಳ ನಿಸರ್ಗಧಾಮಕ್ಕೆ ಪರಿಸರ ಪ್ರಶಸ್ತಿಯ ಗರಿ
ಮಂಗಳೂರು,
ಜೂನ್ 6: ಇಲ್ಲಿನ ಪಿಲಿಕುಳ ನಿಸರ್ಗಧಾಮ ಸೊಸೈಟಿಗೆ (PNDS) ಪರಿಸರ ಸಂರಕ್ಷಣೆ ಚಟುವಟಿಕೆ ಮತ್ತು ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯು 2010-11ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಯನ್ನು ನೀಡಿದೆ. ಪ್ರಶಸ್ತಿಯು 1 ಲಕ್ಷ ರುಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. id="toptextpromo">ಪ್ರತಿಷ್ಠಿತ
ಪ್ರಶಸ್ತಿಯನ್ನು ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯವರು ಪಿಲಿಕುಳ ನಿಸರ್ಗಧಾಮದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾಧಿಕಾರಿ ಡಾ. ಎನ್.ಎಸ್. ಚನ್ನಪ್ಪ ಗೌಡ ಅವರಿಗೆ ವಿತರಿಸಿದರು ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಜೆ.ಆರ್. ಲೋಬೊ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ಪ್ರಶಸ್ತಿಯ ಗೌರವವು ಈ ದಿಶೆಯಲ್ಲಿ ಸಹಕರಿಸಿದ ಸಾರ್ವಜನಿಕರಿಗೆ, ಅಧಿಕಾರಿಗಳಿಗೆ ಮತ್ತು ಪಿಲಿಕುಳ ನಿಸರ್ಗಧಾಮದ ಚಟುವಟಿಕೆಗಳಲ್ಲಿ ಸ್ವಯಂಸೇವಾ ಮನೋಭಾವದಿಂದ ಭಾಗವಹಿಸಿದ ಪರಿಸರಾಸಕ್ತರಿಗೆ ಸಲ್ಲುತ್ತದೆ. ಮುಂದೆಯೂ ಪಶ್ಚಿಮ ಘಟ್ಟ ಮತ್ತು ಕರಾವಳಿ ಪ್ರದೇಶದಲ್ಲಿ ಪರಿಸರ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಮುಂದುವರಿಸುತ್ತದೆ ಎಂದು ಅವರು ವಿವರಿಸಿದ್ದಾರೆ.











Click it and Unblock the Notifications