ಭೂಗತ ಜಗತ್ತಿನ ಮೇಲೆ ಹೊಸ ಕಣ್ಣು : ಅಶೋಕ್

ಯಾವುದೇ ಕಾರಣಕ್ಕೂ ಬೆಂಗಳೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳು ನೆಲೆಯೂರಲು ಬಿಡುವುದಿಲ್ಲ. ಅಂತಾರ್ಟ್ರೋಯ ಮಟ್ಟದಲ್ಲಿ ಬೆಳೆಯುತ್ತಿ ರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಆದ್ಯ ಕರ್ತತ್ಯ ಎಂದು ಹೇಳಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಉಪವಿಭಾಗಗಳಲ್ಲಿ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಎಸಿಪಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಗಳ ಸಭೆ ಕರೆದಿದ್ದು, ಅಪರಾಧ ಕೃತ್ಯಗಳ ನಿಯಂತ್ರಣದ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಅದೇ ರೀತಿಯಲ್ಲಿ ಅಂಗರಕ್ಷಕರ ಸೇವೆಯನ್ನು ಹೊಂದಿರುವ ಉದ್ಯಮಿಗಳು ತಮ್ಮ ಅಂಗ ರಕ್ಷಕರ ಸಹಾಯದಿಂದ ಕೆಲವು ಅಪರಾಧ ಕೃತ್ಯಗಳಲ್ಲಿ ತೊಡಗಿ ದ್ದಾರೆ ಎಂಬ ಮಾಹಿತಿ ಬಂದಿದ್ದು, ಅಂತಹ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುವ ಮೂಲಕ ಅವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ. ಅದೇ ರೀತಿ ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿ ಸುವ ದೃಷ್ಟಿಯಿಂದ ನಮ್ಮಲ್ಲಿರುವ ಪೊಲೀಸ್ ಸಿಬ್ಬಂದಿಗೆ ವಿದೇಶಗಳಲ್ಲಿ ತರಬೇತಿ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಭಯೋತ್ಪಾದನೆ ನಿಗ್ರಹ ಪಡೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ರಾಜ್ಯದಲ್ಲಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅಗತ್ಯ ಕ್ರಮ ಗಳನ್ನು ಕೈಗೊಂಡಿದ್ದು, ತರಬೇತಿ ಪಡೆಯುತ್ತಿರುವ ಮೊದಲ ಹಂತದ ಕಮಾಂಡೋ ಪಡೆಯ 80 ಮಂದಿ ಜೂ. 30ರಂದು ಕೂಡ್ಲು ಬಳಿಯ ಕೆಎಸ್ಸಾರ್ಪಿ ಮೈದಾನದಲ್ಲಿ ತಾಲೀಮು ಪ್ರದರ್ಶನ ನೀಡಲಿದ್ದಾರೆ ಎಂದು ಅಶೋಕ್ ತಿಳಿಸಿದರು.
ಅದೇ ರೀತಿಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಯನ್ನು ಮುಂದಿನ ಹತ್ತು ದಿನಗಳಲ್ಲಿ ಸೂಕ್ತ ಸ್ಥಳಕ್ಕೆ ಸ್ಥಳಾಂತರ ಮಾಡಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದ್ದು, ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಿಗಾಗುವ ಸಮಸ್ಯೆಗಳನ್ನು ಬಗೆಹರಿಸುವ ದೃಷ್ಟಿಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೂಕ್ತ ಸ್ಥಳವನ್ನು ನಿಗದಿ ಮಾಡಿರುವುದಾಗಿ ಸಚಿವರು ತಿಳಿಸಿದರು.












Click it and Unblock the Notifications