ಪಾದ್ರಿಯಿಂದ ಲೈಂಗಿಕ ದೌರ್ಜನ್ಯ : ಹೆಂಡತಿ ಆರೋಪ

ಪ್ರಿಯಲತಾ ಎಂಬ ಮಹಿಳೆ ಗಂಡ ಕೆ. ಶಾಂತರಾಜು ಎಂಬ ವ್ಯಕ್ತಿಯ ವಿರುದ್ಧ ದೂರಿನಲ್ಲಿ, ಅಪ್ರಾಪ್ತ ವಯಸ್ಕ ಹುಡುಗಿಯನ್ನು ವಂಚಿಸಿ, ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ. ಈ ದೂರನ್ನು ಪುಷ್ಟೀಕರಿಸಲು ತನ್ನ ಬಳಿ ಛಾಯಾಚಿತ್ರಗಳಿವೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಶಾಂತರಾಜು ಮಾತ್ರವಲ್ಲ ಅವರ ಇತರ ಕುಟುಂಬದ ಸದಸ್ಯರು ಕೂಡ ಇದರಲ್ಲಿ ಭಾಗಿಯಾಗಿದ್ದಾರೆ. ಆದರೆ, ರಾಜಕೀಯ ಪ್ರಭಾವವನ್ನು ಬಳಸಿ ಹಗರಣಗಳನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಆಕೆ ಹೇಳಿದ್ದಾಳೆ. ಶಾಂತರಾಜು ಮತ್ತು ಪ್ರಿಯಲತಾ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿರುವ ಶಾಂತರಾಜು ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದು, ಚರ್ಚ್ ನ ಆಸ್ತಿಯನ್ನು ಲಪಟಾಯಿಸುವ ದುರುದ್ದೇಶದಿಂದ ತನ್ನ ಮೇಲೆ ಆರೋಪ ಹೊರಿಸಲಾಗಿದೆ ಎಂದು ಪ್ರತ್ಯಾರೋಪ ಮಾಡಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ವಿಚ್ಛೇದನಕ್ಕಾಗಿ ಇಬ್ಬರೂ ದೂರು ಸಲ್ಲಿಸಿರುವುದರಿಂದ, ಆರೋಪಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದಕ್ಕೆ ಆರ್ಚ್ ಬಿಷಪ್ ಬರ್ನಾರ್ಡ್ ಮೋರಾಸ್ ಏನು ಹೇಳುತ್ತಾರೆ?











Click it and Unblock the Notifications