ಭಗ್ನ ಪ್ರೇಮ: ಸೀಮೆಎಣ್ಣೆ ಸುರಿದುಕೊಂಡು ಗಗನಸಖಿ ಆತ್ಮಹತ್ಯೆ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಆಶಾ ಮಹಮ್ಮದ್ ಆಲಿ (21) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನು ಎಂಬಾತನನ್ನು ಪ್ರೀತಿಸುತ್ತಿದ್ದರು. ಕೆಲ ದಿನಗಳಿಂದ ಅವರಿಬ್ಬರ ಮಧ್ಯೆ ವಿರಸ ಉಂಟಾಗಿತ್ತು. ಇದರಿಂದ ಬೇಸರಗೊಂಡ ಅವರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೆಳತಿ ಸೌಮ್ಯ ಜತೆ ಆಶಾ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗೆಳತಿ ಮನೆಯಲ್ಲಿ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಮ್ಯ ಬೆಳಗ್ಗೆ ಮನೆಗೆ ಬಂದು ಬಾಗಿಲು ಬಡಿದಾಗ ಒಳಗಿನಿಂದ ಪ್ರತಿಕ್ರಿಯೆ ಬಂದಿಲ್ಲ. ಅನುಮಾನಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ಆಶಾ ಸತ್ತು ಬಿದ್ದಿದ್ದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮನು ಯಾರು ಎಂದು ಗೊತ್ತಾಗಿಲ್ಲ. ಆಶಾ ಅವರ ಮೊಬೈಲ್ ಫೋನ್‌ನಲ್ಲಿ ಆತ ಕಳುಹಿಸಿರುವ ಹಲವಾರು ಎಸ್‌ಎಂಎಸ್ ಸಂದೇಶಗಳಿವೆ. ಆ ಸಂದೇಶಗಳನ್ನು ಓದಿದರೆ ಅವರಿಬ್ಬರ ಮಧ್ಯೆ ಪ್ರೀತಿ ಇತ್ತು ಎಂದು ಗೊತ್ತಾಗುತ್ತದೆ. ಅವರಿಬ್ಬರೂ ದೂರವಾಗಿದ್ದ ವಿಷಯ ಎಸ್‌ಎಂಎಸ್‌ಗಳಿಂದ ತಿಳಿಯುತ್ತದೆ. ಅನು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆಶಾ ಅವರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಪೋಷಕರು ಶವವನ್ನು ಕೇರಳಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.












Click it and Unblock the Notifications