ಆಣೆ-ಪ್ರಮಾಣ ಸಲ್ಲದು : ಪೇಜಾವರ ಶ್ರೀಗಳು
ಉಡುಪಿ,
ಜೂ. 21 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾಗಿರುವುದನ್ನು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಆಕ್ಷೇಪಿಸಿದ್ದಾರೆ. id="toptextpromo">ಅವರು
ಮಂಗಳವಾರ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆ ನಾಡಿನ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ಅವರೊಳಗಿನ ಭಿನ್ನಾಭಿಪ್ರಾಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. id='are-slot-1' class='oiad oi-axt oiadv'> id='top-searched-articles'>ಮಠಗಳು
ಇಂಥ ಬೆಳವಣಿಗೆಗಳನ್ನು ಪ್ರೋತ್ಸಾಹಿಸುವುದಿಲ್ಲ ಎಂದ ಅವರು, ಈ ಬಗ್ಗೆ ತಾವು ಧರ್ಮಾಧಿಕಾರಿ ಹೆಗ್ಗಡೆ ಅವರೊಂದಿಗೆ ಮಾತನಾಡಿಲ್ಲ ಎಂದರಲ್ಲದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿಯವರೊಂದಿಗೂ ಚರ್ಚಿಸಿಲ್ಲವೆಂದು ಪ್ರತಿಕ್ರಿಯೆಸಿದರು.











Click it and Unblock the Notifications