ಯಡಿಯೂರಪ್ಪ ದಾಖಲೆ ಹೊತ್ತು ದೆಹಲಿ ತಲುಪಿದ ಎಚ್.ಡಿ.ಕೆ

ಕುಮಾರಸ್ವಾಮಿ ಅವರು ದಾಖಲೆಗಳ ಸಹಿತ ಮಂಗಳವಾರ ರಾತ್ರಿ 8.30ರ ವಿಮಾನದಲ್ಲಿ ದೆಹಲಿ ತಲುಪಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆಗೆ (ಜೂನ್ 22) ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರರು ಮತ್ತು ಅಳಿಯಂದಿರ ಹೊಸ ಹಗರಣ ಇದಾಗಿದೆ ಎಂದು ಹೇಳಲಾಗಿದೆ.
ಬಿಜೆಪಿ ಹೈಕಮಾಂಡ್ ಈಗಲಾದರೂ ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಗಮನಿಸಲಿ ಎಂಬ ಕಾರಣದಿಂದ ನವದೆಹಲಿಯಲ್ಲಿಯೇ ದಾಖಲೆ ಬಿಡುಗಡೆ ಮಾಡುವುದು ಹಿಂದಿನ ಉದ್ದೇಶವಾಗಿದೆ. ಯಡಿಯೂರಪ್ಪ ಭಾಗಿಯಾಗಿದ್ದಾರೆನ್ನಲಾದ 4 ಹಗರಣಗಳ ಬಗ್ಗೆ ಸಾಕ್ಷ್ಯ, ದಾಖಲೆಗಳನ್ನು ಅವರು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಈ ಮಧ್ಯೆ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವ ವಿಚಾರದ ಬಗ್ಗೆ ಈ ತಿಂಗಳ 27ರವರೆಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನಲ್ಲಿ ಹೇಳಿದ್ದಾರೆ.











Click it and Unblock the Notifications