ಐದರ ತನಕ ಕನ್ನಡ, ಆರನೇ ತರಗತಿಯಿಂದ ಇಂಗ್ಲೀಷ್!
ಬೆಂಗಳೂರು
ಜೂ 26: ಸರ್ಕಾರಿ ಶಾಲೆಗಳಲ್ಲಿ ಆರನೇ ತರಗತಿಯಿಂದ ಇಂಗ್ಲೀಷ್ ಮಾಧ್ಯಮ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರೊಡನೆ ಸಮಾಲೋಚನೆ ನಡೆಸಿ, ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ಹೇಳಿದ್ದಾರೆ. id="toptextpromo">ಒಂದರಿಂದ
ಐದನೇ ತರಗತಿವರೆಗೂ ಕನ್ನಡ ಮಾಧ್ಯಮ ಕಡ್ಡಾಯವಾಗಿರುತ್ತದೆ. ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುವಂತೆ ಸಾರ್ವಜನಿಕ ವಲಯದಿಂದ ಭಾರೀ ಒತ್ತಡಗಳು ಬಂದಿವೆ. ಇಂಗ್ಲೀಷ್ ಭಾಷೆ ಶಿಕ್ಷಣದಿಂದ ವಿದ್ಯಾರ್ಥಿಗಳ ಸಂವಹನ ಕೌಶಲ್ಯ ಹೆಚ್ಚಲಿದೆ. ಗ್ರಾಮೀಣ ಭಾಗದ ಮಕ್ಕಳ ಉನ್ನತ ಶಿಕ್ಷಣಕ್ಕೂ ಅನುಕೂಲವಾಗಲಿದೆ. id='are-slot-1' class='oiad oi-axt oiadv'> id='top-searched-articles'>ಹಾಸನ
ಜಿಲ್ಲೆಯಲ್ಲಿ ಈ ವರ್ಷ 32 ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಮಕ್ಕಳ ಕೊರತೆಯಿಂದ ಮುಚ್ಚಲಾಗಿದ್ದು, ಅಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಒತ್ತು ನೀಡಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ (ಆರ್‌ಇಎ) ಜಾರಿಗೊಳಿಸುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ಎಂಎಲ್‌ಸಿಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಪಾಲ್ಗೊಳ್ಳಬೇಕು ಎಂದು ಸಚಿವ ಕಾಗೇರಿ ಮನವಿ ಮಾಡಿದ್ದಾರೆ.











Click it and Unblock the Notifications